32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶಿಕ್ಷಕ-ರಕ್ಷಕ ಸಭೆಯನ್ನು ಮೇ 18ರಂದುಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅಧ್ಯಯನದ ಪ್ರಗತಿ, ಹಾಜರಾತಿ, ಪರೀಕ್ಷೆ ತಯಾರಿ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್‌ ಲೋಬೋರವರು ವಿದ್ಯಾರ್ಥಿಗಳು ಮನೆಯಲ್ಲಿ ನಿಯಮಿತವಾಗಿ ಓದುವ ಅಭ್ಯಾಸ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಡೆಯುವಂತಹ ಪರೀಕ್ಷೆಗೆ ಸೂಕ್ತ ರೀತಿಯಲ್ಲಿ ತಯಾರಾಗಬೇಕೆಂದು ಸಲಹೆ ನೀಡಿದರು ಹಾಗೂ ಸಂಸ್ಥೆಯ ಸಂಯೋಜಕರಾದ ಯಶವಂತ್‌ ಜಿ ನಾಯಕ್‌ ರವರು ವಿದ್ಯಾರ್ಥಿಗಳ ಉತ್ತಮ ಶಿಕ್ಷಣ, ಶಿಸ್ತು ಮತ್ತು ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವೆಂದು ತಿಳಿಸಿದರು. ಇದರ ಜೊತೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು, ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹ ಶಿಕ್ಷಕಿಯಾದ ಶ್ರೀಮತಿ ಲಿಧಿಯಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!