25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಯು ನಡೆಯುತ್ತಿದ್ದು, ಅಲ್ಲಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಗಳು ಮತ್ತು ಬೇಜಾವಬ್ದಾರಿಯ ಕಾಮಗಾರಿಗಳಿಂದ ಸಾರ್ವಜನಿಕರು ಸಂಕಷ್ಟವನ್ನು ಅನುಭವಿಸುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಡಂತ್ಯಾರು ಪೇಟೆಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯ ಅವ್ಯವಸ್ಥೆಯಿಂದ ಕೂಡಿದ್ದು, ಚರಂಡಿ ನಿರ್ಮಿಸಲು ರಸ್ತೆಯ ಪಕ್ಕದಲ್ಲಿ ಗುಂಡಿ ತೋಡಿದ್ದನ್ನು ಮುಚ್ಚದೆ ಇರುವುದರಿಂದ ಸಾರ್ವಜನಿಕರು ನಡೆದಾಡಲು ಕಷ್ಟಪಡುವಂತಾಗಿದೆ. ಇನ್ನೇನು ಮಳೆಗಾಲ ಆರಂಭವಾಗುತ್ತಿದ್ದು, ಶಾಲಾ ಕಾಲೇಜುಗಳು ಕೂಡಾ ಆರಂಭವಾಗುತ್ತಿದೆ. ಮಳೆಗಾಲದಲ್ಲಿ ಮಳೆಯ ನೀರು ಈ ಗುಂಡಿಗಳಲ್ಲಿ ತುಂಬಿ ಸಾರ್ವಜನಿಕರು ಮತ್ತು ವಾಹನ ಸವಾರರು ಅಪಾಯಕ್ಕೆ ಸಿಲುಕುವ ಸಂಭವವಿದೆ. ರಸ್ತೆ ಕಾಮಗಾರಿಯಿಂದಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಓಡಾಡಲು ಕೂಡಾ ಸರಿಯಾದ ದಾರಿಯ ವ್ಯವಸ್ಥೆ ಇಲ್ಲದಾಗಿದ್ದು, ಮಂಗಳೂರು ಕಡೆಗೆ ಹೋಗುವ ಬಸ್ ನಿಲ್ದಾಣದ ಮುಂಭಾಗದಲ್ಲಿ ದೊಡ್ಡ ಹೊಂಡ ತೋಡಿ ಮಣ್ಣು ರಾಸಿ ಹಾಕಲಾಗಿದೆ. ಉಪ್ಪಿನಂಗಡಿ ಕಡೆಗೆ ಹೋಗುವ ರಸ್ತೆ ತಿರುವಿನಲ್ಲಿ ಹೊಂಡವನ್ನು ಮುಚ್ಚದೆ ಬಿಡಲಾಗಿದ್ದು, ಸರ್ವಿಸ್ ರಸ್ತೆಯ ವ್ಯವಸ್ಥೆ ಇಲ್ಲದೆ ವ್ಯಾಪಾರ ಮಳಿಗೆಗಳಿಗೆ ಬರುವ ಗ್ರಾಹಕರ ವಾಹನಗಳು ರಸ್ತೆಯಲ್ಲೇ ನಿಲ್ಲುಸುವಂತಾಗಿದೆ.

ಅನೇಕ ವರ್ಷಗಳಿಂದ ಮಡಂತ್ಯಾರು ಪೇಟೆಯಲ್ಲಿದ್ದ ಅಟೋ ಪಾರ್ಕಿಂಗ್ ಈಗ ಮಾಯವಾಗಿದ್ದು, ಅಟೋ ರಿಕ್ಷಾಗಳಿಗೆ ನಿಲ್ಲಲು ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸದೆ ರಿಕ್ಷಾ ಚಾಲಕರು ಸಂಕಷ್ಟ ಎದುರಿಸುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿಯನ್ನು ಸುಗಮ ಸಂಚಾರದ ದೃಷ್ಟಿಯಿಂದ ಅಗಲೀಕರಣಗೊಳಿಸಲಾಗುತ್ತಿದ್ದರೂ ವಾಹನ ನಿಲುಗಡೆಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ವಾಹನಗಳು ರಸ್ತೆಯಲ್ಲೇ ನಿಲ್ಲುವಂತಾಗಿದ್ದು, ಇದು ಮತ್ತಷ್ಟು ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

ರಸ್ತೆ ಅಗಲೀಕರಣದ ಹೆಸರಿನಲ್ಲಿ ಮತ್ತಷ್ಟು ಸಮಸ್ಯೆಗಳು ಹೆಚ್ಚಾಗಿದ್ದು, ಇದು ರಸ್ತೆಯ ಅಗಲೀಕರಣವೋ ಅಪಾಯಕ್ಕೆ ಆಹ್ವಾನವೋ ಎಂದು ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕೂಡಲೇ ಸಂಬಂಧಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಸರಿಪಡಿಸಬೇಕಾಗಿದೆ.

Related posts

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya
error: Content is protected !!