24.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20 ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಮೂವರು ಯುವಕರು ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ.

ಯುವತಿಯರು ಆಗ ಪ್ರತಿರೋಧಿಸಿ ಬೊಬ್ಬೆ ಹಾಕಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಮೂವರು ಯುವಕರನ್ನು ಹಿಡಿದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಬಳಿಕ ಬೆಳ್ತಂಗಡಿ ಪೊಲೀಸರು ಆಗಮಿಸಿ ಯುವಕರನ್ನು ವಶಕ್ಕೆ ಪಡೆದು ಮೂವರು ಯುವತಿಯನ್ನು ರಕ್ಷಣೆ ಮಾಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಮೂವರು ಯುವಕರಾದ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್, ಉಸ್ಮಾನ್ ಸಾಲೀಂ ವಿರುದ್ಧ ನೊಂದ ಯುವತಿಯರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಯುವಕರು ಬಳಸಿದ ಸ್ವೀಪ್ಟ್ ಕಾರನ್ನು ವಶಕ್ಕೆ ಪಡೆದು ಯುವಕರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya
error: Content is protected !!