July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 20 ರಂದು ಮಹಿಳಾ ದೌರ್ಜನ್ಯ ಮತ್ತು ಸುರಕ್ಷತೆ ಕಾರ್ಯಕ್ರಮವನ್ನು ಐಕ್ಯೂಎಸಿ, ರೆಡ್ ಕ್ರಾಸ್ , ರೋವರ್ಸ್ & ರೇಂಜರ್ಸ್, POSH Cell ಹಾಗೂ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಲಾಯಿಲಾ, ಬೆಳ್ತಂಗಡಿ ಇದರ ಸಹಯೋಗದಲ್ಲಿ “ಮುಟ್ಟಿನ ನೈರ್ಮಲ್ಯ ದಿನಾಚರಣೆ” ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಲಾಯಿಲ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರೊಫೆಸರ್ ಡಾ. ಕವಿತಾ ಬಿ.ಕೆ. ಉದ್ಘಾಟಿಸಿ ಮುಟ್ಟಿನ ನೈರ್ಮಲ್ಯ ಮಹತ್ವತೆ ಯ ಅಗತ್ಯತೆಯ ಕುರಿತು ಉಲ್ಲೇಖಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಡಾ. ಮೇಘಶ್ರೀ ಬಿ., ಸಹಾಯಕ ಪ್ರಾಧ್ಯಾಪಕರು ಇವರು ಹೆಣ್ಣು ಮಕ್ಕಳ ಋತುಚಕ್ರ ಸಂದರ್ಭದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್, ಬಟ್ಟೆ ಹಾಗೂ Menstrual Cup ನ ಬಳಕೆಯಲ್ಲಿ ಅನುಸರಿಸುವ ಸುರಕ್ಷಿತ ವಿಧಾನಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಋತುಚಕ್ರದ ಸಮಯದಲ್ಲಿ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಬೇಕು, ಹಾಗೂ ವಿದ್ಯಾರ್ಥಿನಿಯರು ಸುಲಭವಾಗಿ ಮಾಡಬಹುದಾದ ಯೋಗಾಸನಗಳ ಕುರಿತು ವಿವರಿಸಿದರು. ನಂತರ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಸುರೇಶ್ ವಿ, ಪ್ರಾಂಶುಪಾಲರು ವಹಿಸಿದ್ದರು. ಇವರು ಅಧ್ಯಕ್ಷೀಯ ನುಡಿಯಲ್ಲಿ ಆರೋಗ್ಯದ ಮಹತ್ವವನ್ನು ವಿವರಿಸಿ ವಿಶೇಷವಾಗಿ ಹೆಣ್ಣು ಮಕ್ಕಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಕಾರ್ಯಕ್ರಮ ಸಹಕಾರಿಯಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ದುರ್ಗಾಪ್ರಸಾದ್ ಸಹಾಯಕ ಪ್ರಾಧ್ಯಾಪಕರು, ಡಾ. ಅಥೀರ ಕೆ, ಸಹಾಯಕ ಪ್ರಾಧ್ಯಾಪಕರು, ಪ್ರಸನ್ನ ಆಯುರ್ವೇದ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, POSH Cell ನ ಸಂಚಾಲಕರು ಪ್ರೊ. ರಶ್ಮಿ ಹೆಚ್, ಪ್ರೊ. ಕವಿತ, ಎನ್.ಎಸ್.ಎಸ್ ಘಟಕ – 2 ಸಂಚಾಲಕರು, ರೇಂಜರ್ಸ್ ಸಂಚಾಲಕರು ಡಾ. ರಾಜೇಶ್ವರಿ ಹೆಚ್. ಎಸ್ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಸಂಚಾಲಕರು ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ, ಸ್ವಾಗತಿಸಿದರು. ಕು. ಚಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಜಯಶ್ರೀ ಧನ್ಯವಾದ ಸಮರ್ಪಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya
error: Content is protected !!