24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

ನೆಲ್ಯಾಡಿ : ಜೀವ ಉಳಿಸುವ ಮಹತ್ವದ ಸೇವೆಯಲ್ಲಿ ನಿರಂತರ ತೊಡಗಿರುವ ಆಂಬುಲೆನ್ಸ್ ಚಾಲಕರನ್ನು ಗೌರವಿಸುವ ನಿಟ್ಟಿನಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್.ಎಂ.ವೈ.ಎಂ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಾಡಿನ ಜೀವ ರಕ್ಷಕರಾದ ಆಂಬುಲೆನ್ಸ್ ಚಾಲಕರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಂದನೀಯ ಫಾ. ಶಾಜಿ ಮಾತ್ಯು, “ಸಾವು–ಬದುಕಿನ ನಡುವಿನ ಅತಿ ಸಂಕಷ್ಟದ ಕ್ಷಣಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುವ ಆಂಬುಲೆನ್ಸ್ ಚಾಲಕರ ಸೇವೆ ಅಮೂಲ್ಯವಾದದ್ದು. ಸಮಾಜವು ಅವರ ತ್ಯಾಗ ಮತ್ತು ಸೇವೆಯನ್ನು ಗುರುತಿಸಿ ಗೌರವಿಸುವುದು ಅತ್ಯವಶ್ಯಕ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕರಾದ ಪಿ. ಮೊಹಮ್ಮದ್ ಮಸೂದ್, ಅಬ್ದುಲ್ ಸಮದ್ ಹಾಗೂ ಪ್ರಜ್ವಲ್ ಪಿ.ಜೆ. ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಹಾಗೂ ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಅ.4: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಗುರುನಮನ 2026’

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
error: Content is protected !!