25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಥೈಲ್ಯಾಂಡ್ ರಾಷ್ಟ್ರೀಯ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂತರರಾಷ್ಟ್ರೀಯ ಮಟ್ಟದ ಕಬಡ್ಡಿ ತರಬೇತುದಾರರಾದ ರವೀಂದ್ರ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಸ್ವಾಗತಿಸಿದರು.

ಎರಡು ದಶಕಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ತರಬೇತುದಾರರಾಗಿರುವ ಇವರು 2001 ರಿಂದ 2019 ರವರೆಗೆ ಕರ್ನಾಟಕ ರಾಜ್ಯ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. 2023ರಲ್ಲಿ ಇರಾನ್‌ನಲ್ಲಿ ನಡೆದ ಜೂನಿಯರ್ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಜೂನಿಯರ್ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿ ಆಗಿದ್ದರು. 2023 ರಲ್ಲಿ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್,
ಬಾಂಗ್ಲಾದೇಶದ ಬಂಗಬಂಧು ಕಪ್ ಹಾಗೂ 2025ರಲ್ಲಿ ಧಾಕಾ ದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಸೇರಿದಂತೆ ಮುಂತಾದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಟೂರ್ನಮೆಂಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

2025ರಲ್ಲಿ ವರ್ಲ್ಡ್ ಸೂಪರ್ ಕಬಡ್ಡಿ ಲೀಗ್ (WSKL) ನ ತಾಂತ್ರಿಕ ನಿರ್ದೇಶಕರಾಗಿ ನೇಮಕಗೊಂಡ ಇವರು, ಲೀಗ್‌ನ ತಾಂತ್ರಿಕ ವಿನ್ಯಾಸ, ಸ್ಪರ್ಧಾ ಮಾದರಿ, ಹಾಗೂ ರೆಫರಿ ಮತ್ತು ಕೋಚ್ ಅಭಿವೃದ್ಧಿ ಕಾರ್ಯಕ್ರಮಗಳ ರೂಪಿಕರಣದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

ಭೇಟಿ ವೇಳೆ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ತನ್ನ ಕ್ರೀಡಾ ಸಂಘದ ಮೂಲಕ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಪ್ರಸ್ತುತ ಯುಪಿ ಯೋಧ ತಂಡವನ್ನು ಪ್ರತಿನಿಧಿಸುತ್ತಿರುವ ಗಗನ್ ಗೌಡ ಸೇರಿದಂತೆ 6 ವಿದ್ಯಾರ್ಥಿಗಳು ಪ್ರೋ ಕಬ್ಬಡಿಯಂತ ಪಂದ್ಯಾವಳಿಲ್ಲಿ ಯಶಸ್ವಿಯಾಗಿ ಸ್ಥಾನ ಪಡೆದಿರುವುದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಸಂಸ್ಥೆಯು ಶೈಕ್ಷಣಿಕ ಸಾಧನೆಯ ಜೊತೆಗೆ ಮತ್ತಷ್ಟು ಕ್ರೀಡಾ ಪಟುಗಳು ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಭೇಟಿಯ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸೇರಿದಂತೆ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಕಬ್ಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್, ಸಾರ್ವಜನಿಕ ಸಂಪರ್ಕ ಮತ್ತು ಸಮೂಹ ಮಾಧ್ಯಮಗಳ ಸಂಯೋಜಕ ಅರವಿಂದ್ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!