24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಪರ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು, ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ, ನಂದೀಶ್ ಕುಮಾರ್ ಜೈನ್ ಮತ್ತು ಡಿ.ನಿಶ್ಚಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠ ಈ ಆದೇಶ ನೀಡಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, “ಸಂಬಂಧಿತ ಪೊಲೀಸರು ಕಾನೂನಿನನ್ವಯ 17 ಮಾಧ್ಯಮ ಮತ್ತು ಯೂಟ್ಯೂಬ್ ಚಾನಲ್‌ಗಳ ವಿರುದ್ಧ ಕಾನೂನಿನ ಅನ್ವಯ ಕ್ರಮಕೈಗೊಂಡು ಅನುಪಾಲನಾ ವರದಿ ಸಲ್ಲಿಸಬೇಕು,” ಎಂದು ನಿರ್ದೇಶಿಸಿದೆ.
“ಪ್ರತಿವಾದಿಗಳು ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ, ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ದುರುದ್ದೇಶಪೂರಿತ ಚರ್ಚೆ, ಮಾನಹಾನಿ ವರದಿ ಮಾಡದಂತೆ ನಿರ್ಬಂಧಿಸಬೇಕು,” ಎಂದು ಅರ್ಜಿದಾರರು ಕೋರಿದ್ದಾರೆ.

ಅರ್ಜಿದಾರರ ಪರ ವಕೀಲ ಎಸ್.ರಾಜಶೇಖ‌ರ್ ಅರ್ಜಿದಾರರನ್ನು ಗುರಿಯಾಗಿಸಿಕೊಂಡು ಮಾನಹಾನಿಕರ ವಿಡಿಯೊಗಳು, ತಿರುಚಿದ ವಿಷಯ, ಸುಳ್ಳು ಆರೋಪಗಳು ಮತ್ತು ದಾರಿತಪ್ಪಿಸುವ ನಿರೂಪಣೆಗಳ ಪ್ರಸಾರ ಮಾಡುತ್ತಿದ್ದಾರೆ,” ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Related posts

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!