23.2 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

ವೇಣೂರು: ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಗುಂಡೂರಿ ತುಂಬೆದಲೆಕ್ಕಿಯ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ನಡೆಯಿತು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅವರು ಸಮಾರಂಭದ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದರು.


ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬಿಜೆಪಿ ಮಂಗಳೂರು ವಿಭಾಗದ ಸಹಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಡೊಂಕುಬೆಟ್ಟು ನಾರಾವಿ, ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ವೇಣೂರು ಬಿಲ್ಲವ ಸಂಘದ ಗೌರವಾಧ್ಯಕ್ಷ ಪೂವಪ್ಪ ಪೂಜಾರಿ ಪರನೀರು, ಬೆಳ್ತಂಗಡಿ ಶ್ರೀ ಗುನಾಸ್ವಾಸೇ ಸಂಘದ ಕಾರ್ಯದರ್ಶಿ ನಿತೀಶ್ ಎಚ್., ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ದಡ್ಡಾಲ್‌ಪಲ್ಕೆ, ರವೀಂದ್ರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ
ನಿವೃತ್ತ ಶಿಕ್ಷಕ ಸಂಜೀವ ಸುವರ್ಣ, ಕೊರಗಪ್ಪ ಪೂಜಾರಿ ಕೊನೆರೊಟ್ಟು, ನಾರಾಯಣ ಪೂಜಾರಿ ದೋಟ, ನಾರಾಯಣ ಪೂಜಾರಿ ಕರಿಮಣೇಲು, ಅಚ್ಯುತ್ ಪೂಜಾರಿ ಗುಂಡೂರಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 90 ಕ್ಕಿಂತ ಮೇಲೆ ಅಂಕ ಗಳಿಸಿದ 25 ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಸನ್ನಿಧಿ, ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ಎಂಎಸ್ಸಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ನಿರೀಕ್ಷಾ ಎಸ್. ಪೂಜಾರಿ, ಬಿಎಡ್‌ನಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಾನಸ, ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ವವ ಪಥಸಂಚಲನದಲ್ಲಿ ಭಾಗವಹಿಸಿದ್ದ ನಿಶ್ಮಾ ಪೂಜಾರಿ, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುರೇಶ್ ಪೂಜಾರಿ ಸುಮುಖ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನವೀನ್ ಪೂಜಾರಿ ಪಚ್ಚೇರಿ ಸನ್ಮಾನ ಪತ್ರ ವಾಚಿಸಿದರು.

ಉಪನ್ಯಾಸಕ ರಾಕೇಶ್ ಕುಮಾರ್ ಮೂಡುಕೋಡಿ ಪ್ರಾಸ್ತಾವಿಸಿ, ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸತೀಶ್ ಉಜಿರ್‍ದಡ್ಡ ವಂದಿಸಿದರು. ದೀಪಕ್ ಕುತ್ಲೂರು ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!