24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಮೇ 23 ರಂದು ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗಾಗಿ “ಕೇಸ್ ಸ್ಟಡೀಸ್” ವಿಷಯಾಧಾರಿತ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಿಶ್ಲೇಷಣಾತ್ಮಕ ಚಿಂತನೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ನಿರ್ಧಾರ ಕೈಗೊಳ್ಳುವ ಕೌಶಲ್ಯ ಹಾಗೂ ವಾಣಿಜ್ಯ ಕ್ಷೇತ್ರದ ಪ್ರಾಯೋಗಿಕ ಅರಿವು ವೃದ್ಧಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳು ವಿವಿಧ ವಾಣಿಜ್ಯ ಸಂಬಂಧಿತ ಕೇಸ್ ಸ್ಟಡಿಗಳನ್ನು ಪರಿಣಾಮಕಾರಿಯಾಗಿ ಮಂಡಿಸಿ, ವ್ಯವಹಾರಿಕ ಸನ್ನಿವೇಶಗಳ ಕುರಿತು ಸಮಗ್ರ ಮಾಹಿತಿಯನ್ನು ಹಂಚಿಕೊಂಡರು. ಈ ಚಟುವಟಿಕೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಪ್ರಸ್ತುತಿಕರಣ ಕೌಶಲ್ಯ ಹಾಗೂ ತಂಡದ ಸಹಕಾರ ಮನೋಭಾವವನ್ನು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಯೋಜಕರಾದ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!