22.9 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

ಬೆಳ್ತಂಗಡಿ: 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸರಿದೂಗಿಸಲು ಸರಕಾರ ಸಜ್ಜಾಗಿದೆ. ನೂತನ ಶೈಕ್ಷಣಿಕ ವರ್ಷದಿಂದ ಮಕ್ಕಳ ವ್ಯಾಸಂಗಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದ್ದು, 51000 ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರು ಸೇರಿ ಒಟ್ಟು 51000 ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳಲು ಸರಕಾರ ಅನುಮತಿ ನೀಡಿದೆ. ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವ ರೆಗೆ ಈ ನೇಮಕಾತಿ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜೂ.1ರಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಂಗೀಕರಿಸಿ ಸರಕಾರ ಅನುಮತಿ ನೀಡಿದೆ.
ನೇಮಕವಾಗುವ ಒಟ್ಟು 51000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಜಿಲ್ಲಾ ಹಾಗೂ ತಾಲೂಕುವಾರು ವಿವರಗಳನ್ನು ಹೊಸ ಪ್ರಸ್ತಾವನೆ ಮೂಲಕ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಕೂಡ ಸರಕಾರ ಇದೇ ಮಾದರಿಯಲ್ಲಿ 51000 ಅತಿಥಿ ಶಿಕ್ಷಕರನ್ನು ಒದಗಿಸಿತ್ತು. ಈ ಬಾರಿಯೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿರುವುದರಿಂದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಸರಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ಸರಿದೂಗುವ ನಿರೀಕ್ಷೆಯಿದೆ. ಅತಿಥಿ ಶಿಕ್ಷಕರ ನೇಮಕಾತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿರಂತರ ಕಲಿಕೆಗೆ ಅವಕಾಶ ಸಿಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿರೀಕ್ಷೆಯಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related posts

ಬೆದ್ರಬೆಟ್ಟು: ಮರಿಯಾoಬಿಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya
error: Content is protected !!