24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದೆ.

ತಿಂಗಳಲ್ಲೇ 3ನೇ ಬಾರಿ ತೈಲ ದರ ಪರಿಷ್ಕರಣೆ!

ಪ್ರಸಕ್ತ ತಿಂಗಳಿನಲ್ಲಿ ಇಂಧನ ದರವನ್ನು ಪರಿಷ್ಕರಿಸುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಮುಂಬರುವ ದಿನಗಳಲ್ಲಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿ, ನಿತ್ಯಬಳಕೆಯ ತರಕಾರಿ, ಹಾಲು ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!