23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ರವರ ದೂರಿನ ಮೇರೆಗೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು.9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಮತ್ತು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya
error: Content is protected !!