23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಮುಂಡೂರು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ, ಮುಂಡೂರು ಇದರ ವತಿಯಿಂದ ಮುಂಡೂರು ಗ್ರಾಮದ ಎಲ್ಲಾ ಧರ್ಮ ಮತ್ತು ಸಮುದಾಯದ ಮಕ್ಕಳಿಗೆ ಮೇ 24ರಂದು ಬೆಳಿಗ್ಗೆ ಶ್ರೀ ಶಾರದಾಂಬ ಯುವಕ ಮಂಡಲದ ಮೈದಾನದಲ್ಲಿ ಸ್ಫೂರ್ತಿ ಬದುಕಿನ ಹೊಸ ಚೈತನ್ಯ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.


ಮಂಗಳೂರು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಬ್ಯಾಗ್ ಪುಸ್ತಕ ವಿತರಣೆ ಮಾಡಲಿದ್ದಾರೆ.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಜಯಂತ್ ಕೋಟ್ಯಾನ್,ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಮೊಕ್ತೇಸರ ರಾಜೀವ್, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್ ಅಧ್ಯಕ್ಷರು, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ,, ಕಾರ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಚಂದ್ರಾವತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂದ ಉಪಾಧ್ಯಕ್ಷ ಸುಂದರ ಪೂಜಾರಿ ಭಾಗವಹಿಸಲಿದ್ದಾರೆ.


ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಸ್ಫೂರ್ತಿ – ಬದುಕಿಗೆ ಹೊಸ ಚೈತನ್ಯ…ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಸ್ವಿತೇಶ್ ಎಸ್. ಬಾರ್ಯ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ವಸಂತ ಪೂಜಾರಿ ತಿಳಿಸಿದ್ದಾರೆ.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya
error: Content is protected !!