23.8 C
ಪುತ್ತೂರು, ಬೆಳ್ತಂಗಡಿ
October 8, 2026
ಆಯ್ಕೆ

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

ಪುತ್ತೂರಿನ ಕಬಕ ನಿವಾಸಿ ಅಕ್ಷತಾ ಎ ಪಿ ರವರು ‘A CRITICAL STUDY ON RESOLUTION OF COMMERCIAL DISPUTES IN REAL ESTATE SECTOR THROUGH ADR MECHANISM’ ಎಂಬ ವಿಷಯದ ಮೇಲೆ ತಮ್ಮ ಪಿಹೆಚ್‌ಡಿ ಮಹಾಪ್ರಬಂಧವನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಕ್ಕೆ (KSLU) ಸಲ್ಲಿಸಿ ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿರುತ್ತಾರೆ.

ಮಂಗಳೂರಿನ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ತಾರನಾಥ್ ರವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಪೂರ್ಣಗೊಳಿಸಿರುವ ಡಾ ಅಕ್ಷತಾ ಎಪಿ ಯವರು ಪ್ರಸ್ತುತ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2019-20 ರಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಎಸ್ ಡಿ ಎಮ್ ಪಿಯು ಕಾಲೇಜ್ ಉಜಿರೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾಗಿರುವ ರಾಜೇಶ್ ಕಲ್ಬೆಟ್ಟುರವರ ಪತ್ನಿ. ಕಡಬದ ನಿವೃತ್ತ ಮೆಸ್ಕಾಂ ಇಂಜಿನಿಯರ್ ಅಣ್ಣಿ ಗೌಡ ಪಣೆಮಜಲು ಮತ್ತು ದುರ್ಗಾವತಿ ರವರ ಪುತ್ರಿ ಹಾಗೂ ಬೆಳ್ತಂಗಡಿ ತಾಲೂಕು ಮಲವಂತಿಗೆಯ ಕುಂಞಿಯಣ್ಣ ಗೌಡ ಕಲ್ಬೆಟ್ಟು ಮತ್ತು ಜಾನಕಿ ರವರ ಸೊಸೆ.

Related posts

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

Suddi Udaya

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya
error: Content is protected !!