31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಈ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ . ವಿಶ್ವನಾಥ್ .ಪಿ ದೀಪ ಪ್ರಜ್ವಲಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಶಿಕ್ಷಕರ ಜವಾಬ್ದಾರಿ, ಶಿಕ್ಷಕರಿಗೆ ಬೇಕಾದ ಕೌಶಲಗಳು, ವಿದ್ಯಾರ್ಥಿಗಳನ್ನು ತಯಾರು ಮಾಡುವ ರೀತಿ, ಶಿಕ್ಷಕರ ಪಾತ್ರ ಏನು ಎಂಬಿತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು. ಮಂಗಳೂರಿನ ಸೈಂಟ್ ಆಗ್ನೆಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕಾವ್ಯಶ್ರೀ ಕೆ.ಬಿ.ಮಾತನಾಡಿ ಕಾರ್ಯಾಗಾರದ ರೂಪು ರೇಷೆಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಶಿಕ್ಷಕರಿಗೆ ಕಾರ್ಯಾಗಾರದ ಅಗತ್ಯತೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಗೀತಾ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕಾವ್ಯ ಸ್ವಾಗತಿಸಿ, ರಮಾರಾಜೇಶ್ ಧನ್ಯವಾದವಿತ್ತರು. ಮನಿಷಾ ಕಾರ್ಯಾಗಾರಕ್ಕೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಇಲ್ಲಿನ ಶಿಕ್ಷಕ ವೃಂದದವರು ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya
error: Content is protected !!