27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಮಂಗಳೂರು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.

Related posts

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಮಹಾಸಭೆ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಕನ್ಯಾಡಿ -2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಆಟಿಡೊಂಜಿ ದಿನ”

Suddi Udaya
error: Content is protected !!