32.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಓರ್ವ ಆರೋಪಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ನೇತೃತ್ವದ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ವೇಶ್ಯಾವಟಿಕೆ ನಡೆಸುತ್ತಿದ್ದ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ(55) ಮತ್ತು ಉಸ್ಮಾನ್(38) ನನ್ನು ಬಂಧಿಸಿ ,ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿ ಪ್ರಕರಣ ದಾಖಲಿಸಿದ್ದರು.ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಸುಂದರ್ ಶೆಟ್ಟಿ ಮತ್ತು ಉಸ್ಮಾನ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.11 ರಂದು ಸಂಜೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ಉಸ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ನಡೆಸಿದ ನ್ಯಾಯಾಲಯ ಎರಡನೇ ಆರೋಪಿ ಉಸ್ಮಾನ್ ಗೆ ಮೇ.25 ರಂದು ಜಾಮೀನು ಮಂಜೂರು ಮಾಡಿದೆ. ಉಸ್ಮಾನ್ ಪರ ಬೆಳ್ತಂಗಡಿಯ ವಕೀಲರಾದ ಸೆವಿಯಾರ್ ಪಾಲೇಲಿ ವಾದ ಮಂಡಿಸಿದ್ದಾರೆ.

Related posts

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya
error: Content is protected !!