32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣದ ಅಗತ್ಯತೆಯನ್ನು ಮನಗಂಡು, ಸಂಬಂಧಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಲೆಯಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ, ಮೂಲಸೌಕರ್ಯಗಳ ಕೊರತೆ ಹಾಗೂ ಹೆಚ್ಚುತ್ತಿರುವ ಅಗತ್ಯತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು ಕಾಮಗಾರಿಗೆ ಅನುಮೋದನೆ ನೀಡಿ ರೂ.2.00 ಕೋಟಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಿವಾಸಿ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ, ಸುರಕ್ಷಿತ ವಸತಿ ವ್ಯವಸ್ಥೆ ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನೂತನ ಕಟ್ಟಡ ನಿರ್ಮಾಣವು ಮಹತ್ವದ ಹೆಜ್ಜೆಯಾಗಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಪರಿಸರ ನಿರ್ಮಾಣವಾಗಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಉತ್ತೇಜನ ಸಿಗಲಿದೆ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.ಸದರಿ ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಮಾನ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!