31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಮೇ 25ರಂದು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ 
ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪ್ತಿಗೊಂಡವು.

ಕಾರ್ತಿಕ ಮಾಸದ ದೀಪೋತ್ಸವದೊಂದಿಗೆ ಎಂದಿನಂತೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಪುನರಾರಂಭಗೊಳ್ಳಲಿವೆ. 
ಸೋಮವಾರದ ಕಾರಣ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಊರುಪರಊರುಗಳಿಂದ ಆಗಮಿಸಿದ ಸಾವಿರಾರು ಭಕ್ತರು 
ಉತ್ಸವಗಳಲ್ಲಿ ಪಾಲ್ಗೊಂಡರು.

ಯಕ್ಷಗಾನ ಮೇಳದ ತಿರುಗಾಟ ಸಮಾಪ್ತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ವಾರ್ಷಿಕ ತಿರುಗಾಟವೂ ಇದೇ 
ಸಂದರ್ಭದಲ್ಲಿ ಸಮಾಪ್ತಿಗೊಂಡಿತು. ಈ ಅಂಗವಾಗಿ ಮೇಳದ ಶ್ರೀ ಮಹಾಗಣಪತಿ ದೇವರಿಗೆ ಧರ್ಮಸ್ಥಳದ ಮಂಜುಕೃಪಾದಲ್ಲಿ ಮಧ್ಯಾಹ್ನ ಗಣಯಾಗ ಹಾಗೂ ಮಹಾಪೂಜೆ ನೆರವೇರಿಸಲಾಯಿತು.

ಸಂಜೆ ಮಹಾಪೂಜೆಯ ನಂತರ ಕ್ಷೇತ್ರದ ಸಕಲ ಗೌರವಗಳೊಂದಿಗೆ ಶ್ರೀ ಮಹಾಗಣಪತಿ ದೇವರನ್ನು ಭವ್ಯ ಶೋಭಾಯಾತ್ರೆಯ ಮೂಲಕ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಆನೆಗಳು, ಬಸವ, ಕೇರಳದ ಚೆಂಡೆ ವಾದ್ಯ ಬಳಗ, ಜಾಗಟೆ ಹಾಗೂ ವಿವಿಧ ವಾದ್ಯಮೇಳಗಳ ವೈಭವದ ನಡುವೆ ನಡೆದ ಮೆರವಣಿಗೆಯಲ್ಲಿ ಭಕ್ತರು ಭಕ್ತಿಭಾವದಿಂದ ಪಾಲ್ಗೊಂಡರು. ಬಳಿಕ ಶ್ರೀ ದೇವರ ದರ್ಶನ ಸೇವೆ ನೆರವೇರಿಸಿ, ಛತ್ರ ಗಣಪತಿ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮೇಳದ ಯಜಮಾನ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಪಾರುಪತ್ಯೆದಾರ ಲಕ್ಷ್ಮೀನಾರಾಯಣ ರಾವ್, ಮೇಳದ ವ್ಯವಸ್ಥಾಪಕ ಗಿರೀಶ್ ಹೆಗ್ಡೆ, ಯಕ್ಷಗಾನ ಕಲಾವಿದರು, ಕ್ಷೇತ್ರದ ಸಿಬ್ಬಂದಿ ವರ್ಗ ಹಾಗೂ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

ಇಂದಿನಿಂದ ಮೂರು ದಿನಗಳ ಕಾಲ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಸೇವೆಯಾಟಗಳು ನಡೆಯಲಿದ್ದು, ಕಲಾವಿದರು ಸಂಪ್ರದಾಯಬದ್ಧವಾಗಿ ಗೆಜ್ಜೆ ಬಿಚ್ಚುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ತಿರುಗಾಟಕ್ಕೆ ಮಂಗಳ ಹಾಡಲಿದ್ದಾರೆ.

Related posts

ಮುಂಡಾಜೆ ಗ್ರಾಮ ಪಂಚಾಯತ್ ಗ್ರಾಮಸಭೆ ರದ್ದು: ಅಧಿಕಾರಿಗಳು ಗೈರು: ಧರಣಿ ಕುಳಿತ ಗ್ರಾಮಸ್ಥರು

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!