26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಭಾರತದ 15ನೇ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಟನ್ ಅವರು ಬೆಳ್ತಂಗಡಿಗೆ ಭೇಟಿ ನೀಡಲಿದ್ದು ಈ ಸಮಯದಲ್ಲಿ ಅವರು ಕಾರ್ಯಕ್ರಮೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮೇ. 26ರಂದು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಉಪರಾಷ್ಟ್ರಪತಿಗಳ ಭೇಟಿಯ ಹಿನ್ನಲೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಯಾ ಆಯಾ ಅಧಿಕಾರಿಗಳ ಕರ್ತವ್ಯದ ಬಗ್ಗೆ ಸೂಕ್ತ ಸೂಚನೆ ಹಾಗೂ ಸಲಹೆಗಳನ್ನು ನೀಡಲಾಗಿದೆ. ಎಲ್ಲಾ ಜಿಲ್ಲೆಯಲ್ಲಿ ಮೂಡದ ಸಮಸ್ಯೆ ಇದೆ. ಬೆಳ್ತಂಗಡಿ ತಾಲೂಕಿನ ಮೂಡದ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಮಾಡಿದ್ದಾರೆ. ಹೊಸ ನೇಮಕಾತಿ ಆಗುವ ತನಕ ಸ್ವಲ್ಪ ಸಮಸ್ಯೆ ಇದೆ ಎಂದರು. ಸ್ವಯಂ ಇಚ್ಛೆಯಿಂದ ಕುದುರೆಮುಖ ರಾ ಷ್ಟ್ರೀಯ ಉದ್ಯಾನವನ ಒಳಗಿರುವ ಕುಟುಂಬದಿಂದ ಸ್ಥಳಾಂತರಗೊಳ್ಳಲು ಮುಂದೆ ಬರುತ್ತಾರೆ ಅವರಿಗೆ ಪರಿಹಾರ ನೀಡಲಾಗಿದೆ ಹೊರತು ಯಾರನ್ನೂ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ ಈ ಬಗ್ಗೆ ಗೊಂದಲ ಬೇಡ ಎಂದರು. ಪಡಿತರ ಚೀಟಿ ಸಂಬಂಧಿಸಿದಂತೆ ಏನಾದರೂ ಸಮಸ್ಯೆ ಇದ್ದರೆ ಪರಿಶೀಲನೆ ಮಾಡುತ್ತೇವೆ ಎಂದರು.

ಜಿಲ್ಲಾದಿಕಾರಿ ದರ್ಶನ್ ಹೆಚ್‌ವಿ ಮತ್ತು ಪೊಲೀಸ್ ಆಯುಕ್ತ ಅರುಣ್ ಕುಮಾರ್ ಅವರು ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳ್ತಂಗಡಿಗೆ ಮೊದಲ ಭೇಟಿ…
ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೆಳ್ತಂಗಡಿ ತಾಲೂಕಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಈ ಹಿಂದೆ ಕುತ್ಲೂರಿಗೆ ಬಂದಿದ್ದೆ. ಮುಂದೆ ಬರುತ್ತೇನೆ. ಮಳೆಗಾಲದ ಪೂರ್ವಭಾವಿ ಸಭೆ ನಡೆಸುತ್ತೇನೆ ಹಾಗೆಯೆ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

Related posts

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya
error: Content is protected !!