26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

ಬೆಳ್ತಂಗಡಿ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ (ಕುರ್ಬಾನಿ) ನಡೆಯುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಇಂದು(ಮೇ 26) ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020 ಹಾಗೂ ಜಾನುವಾರು ಸಾಗಾಟ ನಿಯಮಾವಳಿ–2021 ಅನ್ವಯ ಗೋವಂಶಗಳ ಅಕ್ರಮ ಸಾಗಾಣಿಕೆ, ಹತ್ಯೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕುರ್ಬಾನಿಯನ್ನು ತಡೆಗಟ್ಟಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಬಜರಂಗದಳ‌ ಸಾಪ್ತಾಹಿಕ ಮಿಲನ್ ಮೋಹನ್ ನಡ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೋಜಕ್‌ ದಿನೇಶ್ ಚಾರ್ಮಾಡಿ, ಜಯಾನಂದ ಕಲ್ಮಂಜ ,ರಾಘವೇಂದ್ರ ಉಂಕ್ರೊಟ್ಟು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya
error: Content is protected !!