October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

ಬೆಳ್ತಂಗಡಿ: ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೖಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ರವರ ತಾಯಿ ಲೀಲಾವತಿಯವರು ಎ.13 ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇಲಿನ ಬಂಧನದ ಭೀತಿಯಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ತಿಮರೋಡಿಗೆ ಮೇ.26 ರಂದು ನಿರೀಕ್ಷಣಾ ಜಾಮೀನು ಬಗ್ಗೆ ತೀರ್ಪು ನೀಡುವ ವೇಳೆ ಕಠಿಣ ಪದಗಳಿಂದ ತಿಮರೋಡಿ ಬಗ್ಗೆ ಉಲ್ಲೇಕಿಸಿದೆ ನ್ಯಾಯಾಲಯ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಮಹೇಶ್ ತಿಮರೋಡಿ ಆಡಿಯೋದಲ್ಲಿ ಆಡಿದ ಮಾತುಗಳ ಬಗ್ಗೆ ಹೇಳಿಕೆ ನೀಡಿದ ನ್ಯಾಯಲಯ. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ,. ಹುಚ್ಚುನಾಯಿ ಮಾತುಗಳ ಬಗ್ಗೆ ನಿರ್ಲಕ್ಷ ಮಾಡಿ ಎಂದು ನ್ಯಾಯಾಲಯ ಚಾಟಿ ಬೀಸಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಾರಕ್ಕೊಮ್ಮೆ ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಸಹಿ ಮಾಡುವಂತೆ ಷರತ್ತು ವಿಧಿಸಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ನ್ಯಾಯಾಲಯ. ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ. ದೂರುದಾರರ ವಿರುದ್ಧ ತಿಮರೋಡಿ ಅವರು ಯಾವುದೇ ಮಾನಹಾನಿ ಅಥವಾ ಅಸಭ್ಯ ಪದ ಬಳಕೆ ಮಾಡಿಲ್ಲ. ಪ್ರಜ್ವಲ್ ಮತ್ತು ಸಂತ್ರಸ್ತೆಯ ಪುತ್ರ ನಟಿಸಿರುವ ನಾಟಕದ ಬಗ್ಗೆ ಮಾತನಾಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.ಸರ್ಕಾರದ ಪರ ವಕೀಲರು, ಅರ್ಜಿದಾರರು ದೂರುದಾರರ ಬಗ್ಗೆ ಬಗ್ಗೆ ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಆಕೆಯ ಘನತೆಗೆ ಚ್ಯುತಿ ಉಂಟು ಮಾಡಲಾಗಿದೆ. ಇದು ಕೋಮು ದ್ವೇಷಕ್ಕೂ ಪ್ರಚೋದನೆ ನೀಡಿದೆ. ತಿಮರೋಡಿಯನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ದೂರುದಾರರನ್ನು ಪ್ರತಿನಿಧಿಸುವುದಾಗಿ ಹಾಜರಾಗಿದ್ದ ವಕೀಲರು, ತಿಮರೋಡಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುವುದು ಹವ್ಯಾಸವಾಗಿದೆ. ನ್ಯಾಯಮೂರ್ತಿಗಳ ವಿರುದ್ಧವೇ ಆರೋಪ ಮಾಡಿದ್ದಾರೆ. ಅದಕ್ಕೆ ಬೇಷರತ್ ಕ್ಷಮೆಯನ್ನೂ ಕೋರಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು.ಇದಕ್ಕೆ ಪೀಠ, ಹರಕಲು ಬಾಯಿ ಅಂತ ಇರುತ್ತೆ ಏನು ಮಾಡಲಾಗುತ್ತದೆ? ನಾಯಿ ಬೊಗಳಿದರೆ ಏನಾಗುತ್ತದೆ? ನಾಯಿ ಬೊಗಳಿದರೆ ಬೊಗಳುತ್ತದೆ ಅಷ್ಟೆ. ಅದು ಪದೇ ಪದೇ ಬೊಗಳಿದರೆ ಹುಚ್ಚು ನಾಯಿ ಎಂದು ಪರಿಗಣಿಸಿ, ಮುಂದೆ ಹೋಗಬೇಕು. ಅಲ್ಲದೇ, ತಿಮರೋಡಿ ಏನು ಮಾಡುತ್ತಾರೆ ನಮಗೆ ಬೇಕಿಲ್ಲ. ಮೂರು ವರ್ಷ ಶಿಕ್ಷೆಯಾಗುವ ಅಪರಾಧ ಪ್ರಕರಣ ಇದಾಗಿದೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬಹುದಾಗಿದೆ. ನಿಮ್ಮ ವಾದವನ್ನು ಏಕೆ ಆಲಿಸಬೇಕು? ನಿಮ್ಮ ಅರ್ಜಿಯನ್ನು ಸ್ವೀಕರಿಸಿಲ್ಲ ಎಂದು ತಿರಸ್ಕರಿಸಿತು.

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!