32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

ಗುರುವಾಯನಕೆರೆ: ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪೋಷಕರಿಗಾಗಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮವನ್ನು ಮೇ 26ರಂದು ಆಯೋಜಿಸಲಾಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪೋಷಕರನ್ನು ಉದ್ದೇಶಿಸಿ ಮಕ್ಕಳು ಈ ದೇಶದ ಆಸ್ತಿ, ಹೆತ್ತವರು ಮಕ್ಕಳಿಗೆ ಸಮಯ ನೀಡಿ ಅವರ ಕಲಿಕೆಗೆ ಪೂರಕವಾಗಿ ಸ್ಪಂದಿಸಬೇಕು.ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಬೆಳೆಸುವ ಜವಾಬ್ದಾರಿ ನಮ್ಮದು ಎಂದರು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ‌ ಮುಖ್ಯೋಪಾಧ್ಯಾಯರಾದ ಸುಮಿತ್ರಾ ಬಿ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ, ಶಿಸ್ತು, ಕಲಿಕಾ ವಿಧಾನಗಳು ಮತ್ತು ಶಾಲೆಯ ನಿಯಮಾವಳಿಗಳು ಮತ್ತು ಮಕ್ಕಳ ಅಧ್ಯಯನದಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಜೊತೆಗೆ ಹೊಸ ಶೈಕ್ಷಣಿಕ ವಿಧಾನಗಳು, ಚಟುವಟಿಕೆ ಆಧಾರಿತ ಕಲಿಕೆ ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದರು.ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರಾದ ಚಂದ್ರಪ್ಪ ನಿರೂಪಿಸಿದರು.

Related posts

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!