32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಿಂದ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಲಿಲ್ಲಿ ಪುಷ್ಪ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್ ಎನ್ ಕಾಕತ್ಕರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯದ ಧನ್ಯ ಕುಮಾರ್ ಜೈನ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿ ಬಿ ಎಸ್ ಸಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಮನಮೋಹನ್ ನಾಯಕ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರಾಜ್ಯ ಪಠ್ಯಕ್ರಮ ಉಜಿರೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಲಕ್ಷ್ಮಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪರಿಮಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya
error: Content is protected !!