32.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಬಂದು ಹಿಂಬಾದಿ ಸವಾರ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್‌ಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಉರ್ವ ಪೊಲೀಸರು ಆರೋಪಿಗಳನ್ನು ಕೇರಳ ಕಾಂಞಗಾಡ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒರ್ವ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಉಪ್ಪರಡ್ಕ ನಿವಾಸಿ ಆಟೋ ಚಾಲಕ ಕೆ.ಕೆ.ರಾಜ ಎಂಬುವರ ಪುತ್ರ ಸಚಿನ್ (24) ಮತ್ತೋರ್ವ ಆರೋಪಿ ಪುತ್ತೂರು ತಾಲೂಕಿನ ಮಣ್ಣಗುಂಡಿಯ ಚಂದನ್ (24)ನ್ನು ಬಂಧಿಸಲಾಗಿದೆ.

ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ ನಲ್ಲಿ ಬಂದ ಇಬ್ಬರು ಯುವಕರಲ್ಲಿ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್‌ನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯ ಉಂಟಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ, ಮಂಗಳೂರು ಉರ್ವ ಪೊಲೀಸ್ ಠಾಣೆ ಅ.ಕ್ರ ೫೭/೨೦೨೬ ಕಲಂ ೧೨೧(೧),೧೦೯,೧೩೨,೩(೫) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಫ್ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವ: ತೆಕ್ಕಾರು ಶಮ್ಮಾಸ್ ಟಿ ಕೆ ಪ್ರಥಮ ಸ್ಥಾನ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
error: Content is protected !!