32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ವಾಣಿಜ್ಯ ಸಂಘದ ಆಶ್ರಯದಲ್ಲಿ ಕಾಮರ್ಸ್ ಫೆಸ್ಟ್ ಆರೋರ 2K26 ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಅನನ್ಯ ಎಸ್. ಜೈನ್ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳಿಗಾಗಿ ಅಂಕಗಳ ಜೊತೆಗೆ ಅವರ ಕೌಶಲ್ಯವನ್ನು ಬೆಳೆಸುವ ಚಟುವಟಿಕೆಗಳನ್ನು ಮಾಡುವುದು ಅತ್ಯಂತ ಅವಶ್ಯಕ. ಅವರು ಉದ್ಯೋಗ ಕ್ಷೇತ್ರಕ್ಕೆ ಹೋದಾಗ ಈ ರೀತಿ ಚಟುವಟಿಕೆಗಳ ಅನುಭವ ಪೂರಕವಾಗಿರುತ್ತದೆ ಮತ್ತು ನಾಯಕತ್ವದ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ ಅಧ್ಯಕ್ಷೀಯ ಯ ಮಾತುಕತೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಭವಿಷ್ಯಕ್ಕಾಗಿ ಈ ರೀತಿಯ ಚಟುವಟಿಕೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ಪ್ರೊಫೆಸರ್ ನವೀನ ಇವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಮಾಡಿ ಅತಿಥಿಗಳನ್ನು ಸ್ವಾಗತಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ, ಐಕ್ಯೂಎಸಿ ಸಂಚಾಲಕರಾದ ಡಾ. ಕುಶಾಲಪ್ಪ ಎಸ್, ವಾಣಿಜ್ಯ ಸಂಘದ ಸಹಸಂಯೋಜಕರಾದ ಡಾ. ರಾಜೇಶ್ವರಿ ಎಚ್.ಎಸ್., ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ.ಎನ್., ವಾಣಿಜ್ಯ ಸಂಘದ ಪದಾಧಿಕಾರಿಗಳಾದ ಕೌಶಿಕ್ ಶೆಟ್ಟಿ, ವಾಣಿ, ಹರ್ಷಿತ, ವರ್ಷ, ಜಯರಾಜ್ ಮತ್ತು ಸಂದೀಪ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕುಮಾರಿ ಪ್ರತಿಕ್ಷ ಕಾರ್ಯಕ್ರಮವನ್ನು ನಿರೂಪಿಸಿ ಕುಮಾರಿ ವರ್ಷ ವಂದನಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಅನೇಕ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ಕಾರ್ಯಕ್ರಮದ ಸಮರೂಪ ಸಮಾರಂಭವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಮಾಣಿಕ್ಯ ಭಾಗದ ಮುಖ್ಯಸ್ಥರಾದ ಶಂಕರ್ ರಾವ್ ಇವರು ಅತಿಥಿಗಳಾಗಿ ಭಾಗವಹಿಸಿ ಈ ರೀತಿಯ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ವೇದಿಕೆಯನ್ನು ನಿರ್ಮಿಸಿ ಅವರ ಜೀವನದಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ನಿರೂಪಕರಾಗಿ ಕುಮಾರಿ ಅನನ್ಯ ಸಹಕರಿಸಿದರು.

Related posts

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!