October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವಿಶ್ವವಿದ್ಯಾಲಯದ, ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ,ದಂತ ವೈದ್ಯಕೀಯ ವಿದ್ಯಾರ್ಥಿಗಳ ತಂಡವು, ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಮೇ 26ರಂದು ಭೇಟಿ ನೀಡಿದರು.

ಆಸ್ಪತ್ರೆಯ ದಂತ ಚಿಕಿತ್ಸಾ ಕೇಂದ್ರವನ್ನು ವಿಕ್ಷಿಸಿದರು ,ಹಾಗೂ ಗ್ರಾಮೀಣ ಪ್ರದೇಶದ ವೈದ್ಯಕೀಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ,ಮತ್ತು ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ನಗರ ಪ್ರದೇಶಗಳಲ್ಲಿ ಸೌಲಭ್ಯಗಳ ಲಭ್ಯತೆ ಹೆಚ್ಚು ಇದ್ದು ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು, ಆದರೆ ಹಳ್ಳಿ ಪ್ರದೇಶಗಳಲ್ಲಿ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ನಿಭಾಯಿಸಲು ಕಷ್ಚಕರವಾಗಿದ್ದು, ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತರ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೆಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಮೌಲ್ಯ, ದಂತ ವೈದ್ಯಾಧಿಕಾರಿ ಡಾ.ಮಹಮ್ಮದ್ ಮಿಫ್ರಾ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಅನಿಶ್ ಕೃಷ್ಣ ಇರ್ವತ್ರಾಯ, ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ದಿಲ್ಶಾದ್, ಡಾ.ಅಲಿ, ಮ್ಯಾನೇಜರ್ ಭರತ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya
error: Content is protected !!