October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

ಬೆಳ್ತಂಗಡಿ: ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ಸಿರಿ'' ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತಮಾತೃಶ್ರೀ ಇಂಡಸ್ಟಿçಯಲ್ ಪಾರ್ಕ್”ನ ಉದ್ಘಾಟನಾ ಸಮಾರಂಭವು ಮೇ 31 ರಂದು ಭಾನುವಾರ ಪೂರ್ವಾಹ್ನ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಿರಿ'' ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ತಿಳಿಸಿದ್ದಾರೆ.

ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್” ಉದ್ಘಾಟಿಸುವರು. ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, “ಸಿರಿ” ಸಂಸ್ಥೆಯ ಸಂಸ್ಥಾಪಕರು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಡಾ|| ಹೇಮಾವತಿ ವೀ. ಹೆಗ್ಗಡೆ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಉಜಿರೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ರಾಜ್ಯಸಭೆ ದೆಹಲಿ ಕಾರ್ಯದರ್ಶಿ ಡಾ. ಕೆ.ಎಸ್. ಸೋಮಶೇಖರ್ ಭಾಗವಹಿಸುವರು ಎಂದು ತಿಳಿಸಿದ್ದಾರೆ.

ಸ್ವಾವಲಂಬಿ ಬದುಕಿಗೆ ಶಕ್ತಿ ನೀಡಿದ ಸಿರಿ ಗ್ರಾಮೋದ್ಯೋಗ ಸಂಸ್ಥೆ

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀರೇಂದ್ರ ಹೆಗ್ಗಡೆ ಅವರ ಕನಸಿನ ಕೂಸು. ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಇಂದು ಅಕ್ಷರಶಃ ಉದ್ಯೋಗ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದೆ. ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಬೆಳ್ತಂಗಡಿ ಮತ್ತು ಸುತ್ತಮುತ್ತಲ ಊರಿನ ಮಹಿಳೆಯರು ಇಂದು ಭರವಸೆಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಿರಿ ಉತ್ಪನ್ನಗಳು ಇಂದು ರಾಜ್ಯವ್ಯಾಪಿ ಜನಪ್ರಿಯವಾಗಿವೆ. ಆಕರ್ಷಕ ಬೆಲೆ ಮತ್ತು ಗುಣಮಟ್ಟದ ಉತ್ಪನ್ನಗಳಿಂದ ಗ್ರಾಹಕರ ವಿಶ್ವಾಸ ಗಳಿಸಿದೆ.

ಉಪರಾಷ್ಟ್ರಪತಿಗಳ ಕಾರ್ಯಕ್ರಮ:
ಭಾರತದ ಉಪರಾಷ್ಟ್ರಪತಿಗಳು ಮೇ 30ರಂದು ಸಂಜೆ 4.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5.05ಕ್ಕೆ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್ ಆಗಮಿಸಿ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಅಥಿತಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮರುದಿನ ಮೇ 31ರಂದು ಬೆಳಿಗ್ಗೆ 8 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತದನಂತರ ಬೆಳಿಗ್ಗೆ 10 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಬೆಳ್ತಂಗಡಿಯ ರೆಂಕೆದುಗುತ್ತುನಲ್ಲಿ ನಿರ್ಮಿಸಲಾಗಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆಯ `ಸಿರಿ ಇಂಡಷ್ಟ್ರೀಯಲ್ ಪಾರ್ಕ್’ನ್ನು ಉದ್ಘಾಟಿಸಲಿದ್ದಾರೆ. ಅಪರಾಹ್ನ 2.25ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‌ನಿಂದ 3.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 3.15ಕ್ಕೆ ಉಪರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳ ರಾಜ್ಯದ ಕಣ್ಣೂರಿಗೆ ತೆರಳಲಿದ್ದಾರೆ.

Related posts

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
error: Content is protected !!