32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ


ಬೆಳ್ತಂಗಡಿ : ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ನಲ್ಲಿ ಜಿಯೋ ಸಂಸ್ಥೆಯ ನೂತನ ಮೊಬೈಲ್ ಟವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.

ಇದರಿಂದಾಗಿ ಇಲ್ಲಿನ ನೌಕರರು, ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಸಂದರ್ಶಕರಿಗೆ ಉತ್ತಮ ಗುಣಮಟ್ಟದ ಇಂಟರ್‌ನೆಟ್ ಮತ್ತು ಮೊಬೈಲ್ ಸಂಪರ್ಕ ಸೌಲಭ್ಯ ಲಭ್ಯವಾಗುತ್ತದೆ. ಇದರೊಂದಿಗೆ ಆನ್‌ಲೈನ್ ಶಿಕ್ಷಣ, ಡಿಜಿಟಲ್ ವಾಣಿಜ್ಯ, ತ್ವರಿತ ಸಂವಹನ, ಉದ್ಯಮ ನಿರ್ವಹಣೆ ಹಾಗೂ ಗ್ರಾಹಕರ ಸೇವೆಗಳ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.

ಜಿಯೋ ಸಂಸ್ಥೆಯ ಹಿರಿಯ ಅಧಿಕಾರಿ ರಾಜೇಶ್ ಮತ್ತು ಡಿ.ಜಿ.ಎಂ. ಧನಂಜಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!