32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಮನೆ ಇದ್ದಂತೆ. ಇವುಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸ್ವಾವಲಂಬನೆಯನ್ನು ಕಲಿಸುತ್ತವೆ. ಇಂತಹ ಪಾಠಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಬುನಾದಿ. ಸಿದ್ಧವನದ ಶಿಸ್ತು ಮತ್ತು ಪೂರಕ ವಾತಾವರಣ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ ಎಸ್. ಎನ್ ಕಾಕತ್ಕರ್ ಹೇಳಿದರು.

ಇವರು ಮೇ 27 ರಂದು ಉಜಿರೆಯ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಿದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಸಿದ್ಧವನ ಗುರುಕುಲವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ತಾಣ. ಇಲ್ಲಿನ ವಾತಾವರಣ ವಿದ್ಯಾರ್ಥಿಗಳಲ್ಲಿ ಸಮಯಪ್ರಜ್ಞೆ ಹಾಗೂ ಜವಾಬ್ದಾರಿಯನ್ನು ಬೆಳೆಸುತ್ತದೆ. ಜೀವನ ಶಿಕ್ಷಣವನ್ನು ಕಲಿಸುವ ಸಿದ್ಧವನ ವಿದ್ಯಾರ್ಥಿಗಳ ನಡವಳಿಕೆ, ಹಾಗೂ ಶೈಕ್ಷಣಿಕ ಪ್ರಗತಿಯನ್ನು ಸಾಧಿಸಲು ದಾರಿದೀಪವಾಗಿದೆ ಎಂದು ಅವರು ಕಿವಿಮಾತು ಹೇಳಿದರು .

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ಕಾರ್ಯ ನಿರ್ವಾಹಕ ಅಧಿಕಾರಿ ಪೂರಣ್ ವರ್ಮ ಮಾತನಾಡಿ, ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಸಿದ್ಧವನ ಗುರುಕುಲ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಚ್ಛತೆಯ ಕಡೆ ಗಮನ ಹರಿಸಿ ನಿಗದಿತ ವೇಳಾಪಟ್ಟಿಯಂತೆ ಅಧ್ಯಯನದಲ್ಲಿ ತೊಡಗಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಯುವರಾಜ ಪೂವಣಿ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

ಸಿದ್ಧವನ ಗುರುಕುಲದ ನಿಲಯ ಪಾಲಕ ಕೇಶವ ನಾಯಕ್ ಇವರು ಗುರುಕುಲದ ನೀತಿ ನಿಯಮಗಳ ಹಾಗೂ ಶಿಸ್ತು ಬದ್ಧ ಜೀವನ ಕ್ರಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕನ್ನಡ ಭಾಷಾ ಪ್ರಾಧ್ಯಾಪಕ ಡಾ. ಮಹಾವೀರ ಜೈನ್ ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಲಕ್ಷ್ಮೀಶ ಭಟ್ ವಂದಿಸಿದರು. ನಿಲಯ ಪಾಲಕ ಕೇಶವ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya
error: Content is protected !!