26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸುವ ತಾಣ. ವಿವಿಧ ಹಿನ್ನಲೆಯಿಂದ ಬಂದಂತಹ ವಿದ್ಯಾರ್ಥಿಗಳು ಒಟ್ಟಿಗೆ ವಾಸಿಸುವುದರಿಂದ ಪರಸ್ಪರ ಗೌರವ ಹಾಗೂ ಹೊಂದಾಣಿಕೆಯ ಮನೋಭಾವವನ್ನು ವಸತಿ ನಿಲಯಗಳು ಕಲ್ಪಿಸುತ್ತವೆ.
ಹೊಸ ವಿಷಯ ತಿಳಿಯುವ ಆಸಕ್ತಿ ಹೊಂದಿದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾಗಿದೆ. ವಸತಿ ನಿಲಯಗಳ ಶಿಸ್ತು ಬದ್ಧ ಜೀವನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ಕಾರ್ಯ ನಿರ್ವಾಹಕ ಅಧಿಕಾರಿ ಪೂರಣ್ ವರ್ಮ ತಿಳಿಸಿದರು.

ಅವರು ಮೇ 28 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ಪೋಷಕರಿಗೆ ನಡೆದ ಪ್ರವೇಶಂ ನ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಉತ್ತಮ ಶಿಕ್ಷಣ ಗಳಿಸಿ ಪೋಷಕರ ಕನಸನ್ನು ನನಸು ಮಾಡುವ ಉದ್ದೇಶ ಇಟ್ಟುಕೊಂಡು ಯಶಸ್ಸು ಗಳಿಸಲು ಪ್ರಯತ್ನ ಪಡಬೇಕು. ಪೋಷಕರಿಗೆ ಹಾಗೂ ಶಿಕ್ಷಕರಿಗೆ ಗೌರವ ನೀಡಬೇಕು. ದೈರ್ಯ ಮತ್ತು ಒತ್ತಡವನ್ನು ಸಹಿಸಲು ಸಾಧ್ಯ ಇರುವ ವಿದ್ಯಾರ್ಥಿಗಳ ಭವಿಷ್ಯ ಚೆನ್ನಾಗಿ ಇರುತ್ತದೆ. ಅಂಕಗಳು ನಿಮ್ಮ ಕನಸಿಗೆ ಕೇವಲ ಮಾಪನ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಿದರೆ ಜೀವನ ಸಾರ್ಥಕವಾಗುತ್ತದೆ.

ನಿಲಯಗಳಲ್ಲಿ ನಿಗದಿ ಪಡಿಸಿದ ದಿನಚರಿಯನ್ನು ಪ್ರಯೋಜನಕಾರಿಯಾಗಿ ರೂಢಿಸಿಕೊಂಡಲ್ಲಿ ವಿದ್ಯಾರ್ಥಿಗಳು ಉನ್ನತ ಪ್ರಗತಿ ಸಾಧಿಸಲು ಸಾಧ್ಯ. ನಿಲಯದ ರೀತಿ ನೀತಿಗಳನ್ನು ಪಾಲಿಸುವುದು ಪ್ರತಿ ವಿದ್ಯಾರ್ಥಿಯ ಆದ್ಯ ಕರ್ತವ್ಯ. ವಸತಿನಿಲಯಗಳ ಶಿಸ್ತು ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣಗಳಿಂದ ದೂರ ಇಡುವಂತೆ ಪ್ರೇರೇಪಿಸಿ, ಅಧ್ಯಯನದಲ್ಲಿ ತೊಡಗಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬಳಿಕ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ನಿಯಮಗಳ ಕುರಿತು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಯುವರಾಜ ಪೂವಣಿ ಮಾಹಿತಿ ನೀಡಿದರು.

ಕನ್ನಡ ಭಾಷಾ ಪ್ರಾಧ್ಯಾಪಕ ಡಾ. ಮಹಾವೀರ ಜೈನ್ ಸ್ವಾಗತಿಸಿ, ಕಾಲೇಜಿನ ಉಪ ಪ್ರಾಂಶುಪಾಲ ಡಾ ರಾಜೇಶ್ ಬಿ ವಂದಿಸಿದರು. ಆಂಗ್ಲ ಭಾಷಾ ಪ್ರಾಧ್ಯಾಪಕಿ ನಿಹಾರಿಕಾ ಜಿ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!