26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ 28 ರಂದು ಕುಲಾಲ ಭವನ ಗುರುವಾಯನಕೆರೆಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಅಧ್ಯಕ್ಷ ಸೋಮಯ ಹನೈನಡೆ ಅವರು ಮಾತನಾಡಿ, ಸಮಾಜದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ವಿದ್ಯಾವಂತರಾಗಿ ಸಮಾಜದ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಜೊತೆಗೆ ತಂದೆ-ತಾಯಿ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾಸ್ಕರ್ ಎಂ. ಪೆರುವಾಯಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ರೀತಿಯ ಪ್ರೋತ್ಸಾಹಗಳನ್ನು ಸಂಘದ ವತಿಯಿಂದ ನೀಡಲಾಗುತ್ತಿದೆ. ಹಾಗೆಯೇ ಹಿರಿಯ ನಾಗರಿಕರಿಗೆ ತುರ್ತು ಸಂದರ್ಭಗಳಲ್ಲಿ ಧನ ಸಹಾಯ ಒದಗಿಸಲಾಗುತ್ತಿದ್ದು, ಠೇವಣಿದಾರರಿಗೆ ಆಕರ್ಷಕ ಬಡ್ಡಿದರದ ಸೌಲಭ್ಯವನ್ನೂ ಸಂಘ ನೀಡುತ್ತಿದೆ ಎಂದು ಹೇಳಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಹಿರಿಯ ನಾಗರಿಕರಿಗೆ ಮಾಶಾಸನ ನೀಡುವಂತಹ ಯೋಜನೆಯನ್ನು ಸಹ ಸಂಘದ ವತಿಯಿಂದ ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಪುತ್ತೂರು ಸಂಘದ ಉಪಾಧ್ಯಕ್ಷ ದಾಮೋದರ ಕುಲಾಲ್, ನಿರ್ದೇಶಕರಾದ ಹೆಚ್. ಪದ್ಮಕುಮಾರ್ ಮತ್ತು ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು.
ತಾಲೂಕು ಸಂಘದ ನಿರ್ದೇಶಕ ದಿನೇಶ್ ಮಾಲಾಡಿ ಸ್ವಾಗತಿಸಿದರು. ಸದಾನಂದ ಕುಲಾಲ್ ವಿದ್ಯಾರ್ಥಿಗಳ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಕಾರ್ಯಕ್ರಮ ನಿರೂಪಿಸಿ, ಸಂದೇಶ್ ಕುಮಾರ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya
error: Content is protected !!