26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) CRE ತರಬೇತಿ ಸಂಸ್ಥೆ ಬೆಳ್ತಂಗಡಿಯಲ್ಲಿ, ಬೆಳ್ತಂಗಡಿ ಹಾಗೂ ಗುರುವಾಯನಕೆರೆಯ ಸಿ.ಎಸ್.ಸಿ ಸೇವಾದಾರರ ಸಭೆಯಲ್ಲಿ ಸಿ.ಎಸ್.ಸಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಿ.ಎಸ್.ಸಿ ಕೇಂದ್ರದ ಮೂಲಕ ಸರ್ಕಾರಿ ಸೇವೆಯನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಇದರ ಜೊತೆಗೆ DIGIPAY ಸೇವೆಯನ್ನು ನೀಡುತ್ತಿದ್ದು ಜನಸಾಮಾನ್ಯರು ತಮ್ಮ ಖಾತೆಯಲ್ಲಿ ಇರುವ ಹಣವನ್ನು ತಮ್ಮ ಊರಿನಲ್ಲಿ ಇರುವ ಸೇವಾಕೇಂದ್ರದಲ್ಲಿ ಹಣ ವಿತ್ ಡ್ರಾ ಮಾಡಿ ನಗದು ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಈ ವೇಳೆ ಭಾರತ ಸರ್ಕಾರದ ಐಟಿ ಸಚಿವಾಲಯದಿಂದ ಸಿ.ಎಸ್.ಸಿ ಈ ಗವರ್ನೆನ್ಸ್ ಮೂಲಕ ನಡೆಸಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಯಾದ ಒಲಿಂಪಿಯಾಡ್ ಪರೀಕ್ಷೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಸಿ.ಎಸ್.ಸಿ ಕೇಂದ್ರದಲ್ಲಿ ನೊಂದಾವಣೆ ಮಾಡಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಸರ್ಟೀಫಿಕೆಟ್ ವಿತರಣೆಯನ್ನು ಮಾಡಲಾಯಿತು, ಹಾಗೂ ಪುದುವೆಟ್ಟು ಗ್ರಾಮದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ರಾಂಕ್ ಪಡೆದು 30,000 ರೂ ಸ್ಕಾಲರ್ಶಿಪ್ ಅರ್ಹವಾಗಿರುವ ವಿದ್ಯಾರ್ಥಿನಿ ವಿಜಿತಾ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ದಿನೇಶ್ ಹಾಗೂ ಗುರುವಾಯನಕೆರೆ ಯೋಜನಾಧಿಕಾರಿಯಾದ ಹರೀಶ್ ಆರ್.ಎಸ್ , ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋಧರ, ಸಿ.ಎಸ್.ಸಿ ವಿಭಾಗದ ಉಡುಪಿ ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿಯಾದ ದಿಲೀಪ್, ಹಾಗೂ ಎರಡು ತಾಲೂಕಿನ ಹಣಕಾಸು ಪ್ರಬಂಧಕರಾದ ಆಕಾಶ್, ರತನ್ , ತಾಲೂಕು ನೊಡೆಲ್ ಅಧಿಕಾರಿಯಾದ ದಿಕ್ಷೀತ್ , ಸುರೇಶ ನಾಯ್ಕ, ನಗದು ಮೇಲ್ವಿಚಾರಕರಾದ ಮಾರುತಿ, ಸವೀನ್, ವಸಂತಿ, ಹಾಗೂ ಎಲ್ಲಾ ಸಿ.ಎಸ್.ಸಿ ಸೇವಾದಾರರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!