27.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2025- 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿನಿಯ ಈ ಅತ್ಯುನ್ನತ ಸಾಧನೆಯು ಶಾಲೆಗೆ, ಉಜಿರೆ ಪ್ರದೇಶಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ಗರಿ ಮೂಡಿಸಿದೆ. ಉಜಿರೆಯ ಸೂರ್ಯ ನಿವಾಸಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ಶಾರದಾ ದಂಪತಿಗಳ ಪುತ್ರಿಯಾಗಿರುವ ಅನನ್ಯ, ತಮ್ಮ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪ್ರತಿಭೆ ಹಾಗೂ ಶಿಕ್ಷಕರ ಸಮರ್ಪಕ ಮಾರ್ಗದರ್ಶನದ ಮೂಲಕ ಈ ಅಮೋಘ ಸಾಧನೆಯನ್ನು ದಾಖಲಿಸಿದ್ದಾರೆ.

ಅನನ್ಯ ಅವರ ಅಣ್ಣ ಕೌಸ್ತು ಕೂಡ ಇದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಕುಟುಂಬದ ಶೈಕ್ಷಣಿಕ ಪರಂಪರೆ ಹಾಗೂ ಪ್ರೋತ್ಸಾಹವೂ ಅನನ್ಯ ಅವರ ಯಶಸ್ಸಿಗೆ ಬಲವಾದ ಅಡಿಪಾಯವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಅನನ್ಯ ಅವರ ಮುಂದಿನ ವಿದ್ಯಾಭ್ಯಾಸವು ಇನ್ನಷ್ಟು ಯಶಸ್ವಿಯಾಗಿ ಸಾಗಲಿ ಹಾಗೂ ಭವಿಷ್ಯದಲ್ಲಿ ಇನ್ನೂ ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

Related posts

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!