24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ಪ್ರಾರಂಭೋತ್ಸವದ ಸಂಭ್ರಮದ ಜೊತೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸಮುದಾಯ ಸಂಪರ್ಕ ಮತ್ತು ಮಾಧ್ಯಮ ವಿಭಾಗದ ನಿರ್ದೇಶಕ ಪ್ರದೀಪ್ ಶೆಟ್ಟಿ ಮಾತನಾಡುತ್ತಾ ಧರ್ಮಸ್ಥಳದ ಮಹತ್ವ, ಧರ್ಮಸ್ಥಳದ ವಿದ್ಯಾಸಂಸ್ಥೆಗಳು ಹಾಗೂ ಚತುರ್ವಿಧ ದಾನ, ಬದಲಾಗುತ್ತಿರುವ ಶಿಕ್ಷಣ ಪದ್ಧತಿ ಹೆತ್ತವರ ನಿರೀಕ್ಷೆಗಳು ಜೊತೆಗೆ ಹೆತ್ತವರ ಕರ್ತವ್ಯಗಳು ಶಿಕ್ಷಣದ ಜೊತೆಗೆ ಸಂಸ್ಕಾರ ನಾಳೆಗಳ ಮರೆತು ಭರವಸೆ ಜೀವನ ಎಂಬಂತೆ ಬದುಕುವ ರೀತಿ ಹತ್ತು ಹಲವು ವಿಚಾರಗಳನ್ನು ಹೆತ್ತವರಿಗೆ ತಿಳಿಯಪಡಿಸಿದರು. ಬಳಿಕ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಸ್ತುತ ಶೈಕ್ಷಣಿಕ ವರ್ಷದ ರೂಪುರೇಷೆಗಳ ಕುರಿತು ಹೆತ್ತವರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ ನಿರ್ವಹಿಸಿದರು. ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Related posts

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!