25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ.

ಮುಡಿಪುವಿನಿಂದ  ಕುಟುಂಬವೊಂದು  ಜಾವಗಲ್ ಗೆ   ತೆರಳುತಿದ್ದ  ಮಿನಿ ಬಸ್ಸಿಗೆ ಮುಂಡಾಜೆ  ಶೀಟ್ ಎಂಬಲ್ಲಿ  ಚಿಕ್ಕಮಗಳೂರು ಕಡೆಯಿಂದ ಉಜಿರೆ ಕಡೆ ಹೋಗುತಿದ್ದ ಸರಕು  ಸಾಗಾಟದ ಕಂಟೈನರ್ ಲಾರಿ  ಕಡೂರಿನಿಂದ ಧರ್ಮಸ್ಥಳಕ್ಕೆ ಬರುತಿದ್ದ ಕೆ ಎಸ್ ಆರ್ ಟಿ. ಸಿ. ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಸ್ಥಳದಲ್ಲಿ ನಿಲ್ಲಿಸದೇ ಲಾರಿ ಸಹಿತ  ತಪ್ಪಿಸಿಕೊಂಡು ಬಂದಿದ್ದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಬಳಿ ಸಾರ್ವಜನಿಕರು ಲಾರಿಯನ್ನು ಅಡ್ಡ ಹಾಕಿದ್ದಾರೆ. ಮಿನಿ ಬಸ್ಸಿನ ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಓವರ್ ಟೇಕ್ ಮಾಡುವ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಬಸ್ಸನ್ನು ತೀರ ರಸ್ತೆ  ಬದಿಗೆ ಕೊಂಡೋಗಿದ್ದು ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಲಾರಿಯು ಮಿನಿ ಬಸ್ಸಿಗೆ ನೇರವಾಗಿ ಮುಖಾಮುಖಿ  ಡಿಕ್ಕಿ ಹೊಡೆಯುತಿದ್ದು ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ  ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!