27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

ಮಂಗಳೂರು: ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರು ಸಂಘ (BMS)ದ ಮುಂದಾಳತ್ವದಲ್ಲಿ ಇಂದು(ಮೇ 30) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಹೆಚ್.ಆರ್. ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ರವಾನಿಸಿ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು.
ಮನವಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ “ಸಮಸ್ತ” ಡಿಜಿಟಲ್ ಆರೋಗ್ಯ ಮಾಹಿತಿ ವ್ಯವಸ್ಥೆ ಮೂಲಕ ಆಶಾ ಕಾರ್ಯಕರ್ತೆಯರ ಮೇಲೆ ಅತಿಯಾದ ಡಿಜಿಟಲ್ ಕೆಲಸದ ಹೊರೆ ಹೇರಲಾಗುತ್ತಿದ್ದು, ಮನೆಮನೆ ಭೇಟಿ, ಗರ್ಭಿಣಿಯರ ಆರೈಕೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಗಳ ಜೊತೆಗೆ ಗಂಟೆಗಟ್ಟಲೆ ಡೇಟಾ ದಾಖಲಿಸುವ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿಸಲಾಗಿದೆ. ಇದರಿಂದ ಆರೋಗ್ಯ ಸೇವೆಯ ಗುಣಮಟ್ಟಕ್ಕೂ ಧಕ್ಕೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಮ್.ಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಹಾಗೂ ವಕೀಲರಾದ ಅನಿಲ್ ಕುಮಾರ್ ಯು, ಆಶಾ ಕಾರ್ಯಕರ್ತೆಯರು ಕೊರೊನಾ ಸೇರಿದಂತೆ ಸಂಕಷ್ಟದ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದರೂ, ಇಂದು ಅವರಿಗೆ ತಕ್ಕ ಗೌರವ, ಭದ್ರತೆ ಹಾಗೂ ನ್ಯಾಯ ದೊರೆಯುತ್ತಿಲ್ಲ ಎಂದು ಹೇಳಿದರು. “ಸಮಸ್ತ” ಆ್ಯಪ್‌ನ ಹೆಚ್ಚುವರಿ ಒತ್ತಡವನ್ನು ಹಿಂಪಡೆಯಬೇಕು, ಪ್ರೋತ್ಸಾಹ ಧನವನ್ನು ನಿಗದಿತ ದಿನಾಂಕಕ್ಕೆ ಪಾವತಿಸಬೇಕು ಹಾಗೂ ನಾಲ್ಕು ವರ್ಷಗಳಿಂದ ಹೆಚ್ಚಳವಾಗದಿರುವ ಧನವನ್ನು ತಕ್ಷಣ ಪರಿಷ್ಕರಿಸಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ “ಸಮಸ್ತ” ಆ್ಯಪ್‌ನ ಹೆಚ್ಚುವರಿ ಕೆಲಸದ ಒತ್ತಡ ರದ್ದುಪಡಿಸುವುದು, ಪ್ರೋತ್ಸಾಹ ಧನವನ್ನು ಸಮಯಕ್ಕೆ ಬಿಡುಗಡೆಗೊಳಿಸುವುದು, ಪ್ರೋತ್ಸಾಹ ಧನ ಹೆಚ್ಚಳ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಮಟ್ಟದ ಸಮಿತಿ ರಚಿಸುವಂತೆ ಒತ್ತಾಯಿಸಲಾಗಿದೆ.


ಈ ಸಂದರ್ಭದಲ್ಲಿ ಭಾರತೀಯ ಮಜ್ದೂರು ಸಂಘದ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಉಪಾಧ್ಯಕ್ಷ ರೋಹಿತಾಶ್ವ , ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ರೇವತಿ, ಬಂಟ್ವಾಳ ತಾಲೂಕು ಅಧ್ಯಕ್ಷೆ ತುಳಸಿ ದೇವರಾಜ್, ಕಾರ್ಯದರ್ಶಿ ಡೀಲಾಕ್ಷೀ, ಕೋಶಾಧಿಕಾರಿ ಸೌಮ್ಯ, ಗೌರವಾಧ್ಯಕ್ಷೆ ಗಿರಿಜಾ ನಾವೂರು, ಪ್ರಮುಖರಾದ ಪ್ರಮೀಳಾ, ಹರಿಣಾಕ್ಷೀ, ಪ್ರಮೀಳಾ ಮಾಣಿ, ಹೇಮಾವತಿ ಸೇರಿದಂತೆ ಆಶಾ ಕಾರ್ಯಕರ್ತೆಯರ ತಂಡ ಹಾಗೂ ಜಿಲ್ಲಾ BMS ಪ್ರಮುಖರು ಉಪಸ್ಥಿತರಿದ್ದರು.

Related posts

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಖೋ ಖೋ ಪಂದ್ಯಾಟ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!