26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

ಬೆಳ್ತಂಗಡಿ: ತಾಲೂಕಿನಲ್ಲಿ ಕಾಡಾನೆ ದಾಂಧಲೆ ಮುಂದುವರಿಯುತ್ತಿದ್ದು ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬುವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ತನ್ನ ಮನೆಗೆ ದ್ವಿಚಕ್ರ ವಾಹನದೊಂದಿಗೆ ಹಿಂದಿರುಗುತ್ತಿದ್ದ ವೇಳೆ ರಾತ್ರಿ 8.45ಕ್ಕೆ ನೆಲ್ಯಡ್ಕ ರಸ್ತೆ ಬಳಿ ಒಂಟಿ ಸಲಗವೊಂದು ಎದುರಾಗಿದ್ದು ಕಾಡಾನೆ ಏಕಾಏಕಿ ವಾಹನದ ಮೇಲೆ ಎರಗಿ ಸ್ಕೂಟರ್‌ನ್ನು ಜಖಂಗೊಳಿಸಿದೆ.

ಆನೆ ಎದುರಾಗುತ್ತಿದ್ದಂತೆ ಬೈಕ್ ಸವಾರ ಸ್ಥಳದಲ್ಲೇ ವಾಹನ ಬಿಟ್ಟು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಮಳೆ ಸುರಿದ ಕಾರಣದಿಂದ ಕತ್ತಲ ವಾತವರಣದಲ್ಲಿ ರಸ್ತೆಯಲ್ಲಿ ಕಾಡಾನೆ ಇರುವುದು ವಾಹನದ ಬೆಳಕಿನ ಪ್ರಕಾಶದಿಂದ ಸರಿಯಾಗಿ ಗೋಚರಿಸದೆ ಸುಮಾರು 10 ಅಡಿ ಅಂತರದಲ್ಲಿ ಕಾಡಾನೆ ನಾರಾಯಣ ಗೌಡರಿಗೆ ಕಾಣಿಸಿಕೊಳ್ಳುತ್ತಿದ್ದಂತೆ ಭಯದಿಂದ ಓಡಿ ಹೋಗಿದ್ದಾರೆ. ಆನೆ ಸ್ಕೂಟರ್ ಮೇಲೆ ತನ್ನ ಗಜ ಹೆಜ್ಜೆಯನ್ನು ಇರಿಸಿ ವಾಹನವನ್ನು ಹಾನಿಗೊಳಿಸಿದೆ.

ಕಾಡಾನೆ-ಮಾನವ ಸಂಘರ್ಷ:
ಧರ್ಮಸ್ಥಳ ಬೋಳಿಯಾರ್ ಎಂಬಲ್ಲಿ ಕಾಡನೆ ಆಟೋ ರಿಕ್ಷಾವನ್ನು ಜಖಂಗೊಳಿಸಿತ್ತು. ನೆರಿಯ ಬಯಲ ಎಂಬಲ್ಲಿ ಆನೆ ಕಾರಿನ ಮೇಲೆ ಹಾಗೂ ಶಿಶಿಲದಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯಿತ್ತದ್ದ ವೇಳೆ ಬೈಕ್ ಮೇಲೆ ಕಾಡಾನೆ ಎರಗಿದ ಪ್ರಕರಣ ತಾಲೂಕಿನಲ್ಲಿ ನಡೆದಿದೆ. ಸೌತಡ್ಕದಲ್ಲಿ ಕಾಡಾನೆ ದಾಳಿಗೆ ಬಾಲಕೃಷ್ಟ ಶೆಟ್ಟಿ ಎಂಬುವರು ಬಲಿಯಾಗಿದ್ದರು. ಇದಲ್ಲದೇ ಕೃಷಿಭೂಮಿಗೆ ಹಾಗಾಗ ಕಾಡಾನೆ ಲಗ್ಗೆ ಇಟ್ಟು ದಾಂಧಲೆ ನಡೆಸುತ್ತಿದೆ. ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರಿಗೆ ಕಾಡಾನೆ ಎದುರಾಗುತ್ತಿರುವುದು ಸರ್ವೇ ಸಮಾನ್ಯವಾಗಿ ಬಿಟ್ಟಿದ್ದು ಸರಕಾರ ಹಾಗೂ ಇಲಾಖೆ ಕಾಡಾನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!