24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್(32) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ಪೆರ್ನೆ ನಿವಾಸಿ ನಿತಿನ್‌ (34) ಎಂಬವರ ದೂರಿನಂತೆ, ಜೂನ್1ರಂದು ಬೆಳಿಗ್ಗೆ, ಪಿರ್ಯಾದಿದಾರರಿಗೆ ವಾಟ್ಸಾಪ್‌ ಮೂಲಕ ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ಬಂದಿದ್ದು, ಸದ್ರಿ ಬಾವಚಿತ್ರವನ್ನು ಪರಿಶೀಲಿಸಿದಾಗ ಮೃತವ್ಯಕ್ತಿಯು ತನ್ನ ಸಹೋದರ ಯತೀಶ (33) ಎಂಬವರಾಗಿರುತ್ತಾರೆ. ಪಿರ್ಯಾದಿದಾರರು ಘಟನಾಸ್ಥಳಕ್ಕೆ ಬಂದು ಸ್ಥಳದಲ್ಲಿರುವ ಸಿಸಿಟಿವಿಯನ್ನು ಪರಿಶೀಲಿಸಿದಾಗ, ತನ್ನ ಸಹೋದರನಿಗೆ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂಬವರುಗಳು ಹಲ್ಲೆ ಮಾಡುತ್ತಿರುವುದು ಕಂಡುಬಂದಿದ್ದು, ಆರೋಪಿಗಳ ಹಲ್ಲೆಯಿಂದಾಗಿ ಸದ್ರಿ ಯತೀಶನು ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2) 103 ಜೊತೆಗೆ 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!