26.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ 31ರಂದು ರಾತ್ರಿ ಸಂಭವಿಸಿದೆ.

ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದ ಆರೋಪಿಯಾಗಿದ್ದಾನೆ.

ಘಟನೆಯ ವಿವರ: ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ರಾಹುಲ್ ಮತ್ತಿತರರು ಮನೆಯಿಂದ ಹೊರಗೆ ಕುಡಿದು ಗದ್ದಲ ಮಾಡುತ್ತಿದ್ದರು. ಇದನ್ನು ಆಕ್ಷೇಪಿಸಿದ ಮಧುಸೂದನ್ ಅವರನ್ನು ರಾಹುಲ್ ಕೋಪದಿಂದ ಬಿಯರ್ ಬಾಟಲ್ ನಿಂದ ಕುತ್ತಿಗೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಮಧುಸೂದನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.
ಮೃತರು ಅವಿವಾಹಿತರಾಗಿದ್ದು, ಇಲೆಕ್ನಿಷಿಯನ್ ವೃತ್ತಿ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya
error: Content is protected !!