September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಮಡಂತ್ಯಾರು ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಪಾರೆಂಕಿ ಇದರ ಸಂಯುಕ್ತ ಆಶ್ರಯದಲ್ಲಿ ಎರಡನೇ ವರ್ಷದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮತ್ತು ಎಸ್. ಎಸ್. ಎಲ್. ಸಿ.. ಪಿಯುಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ ಸ್ವಾತಂತ್ರ್ಯ ಯೋಧ ಉಬರ್ ಮಂಜ ಬೈದ್ಯರ ಸಂಸ್ಕರಣ ಕಾರ್ಯಕ್ರಮವು ಸಂಘದ ಗೌರಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ್ಲ ಇವರ ಮನೆಯಲ್ಲಿ ನಡೆಯಿತು.

ಬಜಾಜ್ ಅಲಯನ್ಸ್ ಇನ್ಸೂರೆನ್ಸ್ ಸಂಸ್ಥೆಯ ಡಿವಿಜನಲ್ ಮ್ಯಾನೇಜರ್ ಪದ್ಮನಾಭ ಸುವರ್ಣ ಮಂಗಳೂರು ಇವರು ಅಪ್ರತಿಮ ವೀರ ಯೋಧ ಉಬಾರ್ ಮಂಜ ಬೈದ್ಯರ ಕುರಿತು ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ಸರ್ಕಾರ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ರಾಜೇಶ್ ಟಿ ಬಂಗೇರ, ಅಧ್ಯಕ್ಷರಾದ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವಲಯ ನಿರ್ದೇಶಕ ಪ್ರಮೋದ್ ಕುಮಾರ್ ಬಳ್ಳಮಂಜ, ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪುನೀತ್ ಕುಮಾರ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಆಶಾ ಉಮೇಶ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸಚಿನ್ ಪೂಜಾರಿ, ಶಿಕ್ಷಕರಾದ ಸುಭಾಷ್ ಚಂದ್ರ ಇವರು ಉಪಸ್ಥಿತರಿದ್ದರು.

ಸುಮಾರು 80 ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ವಿತರಿಸಲಾಯಿತು ಮತ್ತು 7 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಸಮಿತಿಯ ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ ಪುಸ್ತಕ ವಿತರಣೆಯ ಜವಾಬ್ದಾರಿಯನ್ನು ವಹಿಸಿದರು. ಯೋಗೀಶ್ ಕಡ್ತಿಲ ಸ್ವಾಗತಿಸಿ, ಮಡಂತ್ಯಾರು ಗ್ರಾಮ ಪಂಚಾಯತಿ ನಿಕಟ ಪೂರ್ವಧ್ಯಕ್ಷ ರೂಪ ನವೀನ್ ವಂದಿಸಿದರು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಪ್ರವೀಣ್ ದೋಟ ನಿರ್ವಹಿಸಿದರು.
✍️ ವರದಿ ಹರ್ಷ ಬಳ್ಳಮಂಜ

Related posts

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya
error: Content is protected !!