September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

ಬೆಳ್ತಂಗಡಿ: ಬದಲಾದ ಕಾಲಘಟ್ಟದಲ್ಲಿ ಅದಕ್ಕೆ ಪೂರಕವಾಗಿ ಶಿಕ್ಷಣದ ಅಗತ್ಯವಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ಸರಕಾರಿ ಶಾಲಾ ಮಕ್ಕಳಿಗೆ ಭವಿಷ್ಯ ರೂಪಿಸುವ ಶಿಕ್ಷಣದ ಅಗತ್ಯವಿದ್ದು ಇದು ಬಳಂಜ ಶಿಕ್ಷಣ ಟ್ರಸ್ಟ್ ನ ಕಲ್ಪನೆಯಲ್ಲಿ ಸಿಗುತ್ತಿರುವುದು ಹೆಮ್ಮೆಯ ವಿಷಯ. ಮಕ್ಕಳ ಶಿಕ್ಷಣಕ್ಕೆ, ಶಾಲೆಗಳ ಅಭಿವೃದ್ದಿಗೆ ನೆರವು ನೀಡುವುದು ಮಕ್ಕಳ ಭವಿಷ್ಯ ರೂಪಿಸಿದಂತೆ ಎಂದು ಡಬ್ಲಿನ್ ದೇಶದ ಪ್ರಜೆ ಋತಿಕಾಶೋಬಿತ್ ಹೇಳಿದರು .

ಅವರು ಜೂ 1 ರಂದು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ,ಪ್ರೌಢಶಾಲಾ ಆರಂಭೋತ್ಸವ , ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರು ನೀಡಿದ ಎಲ್ ಕೆಜಿ ,ಯು ಕೆಜಿ ಮಕ್ಕಳ ಪಠ್ಯ ಪುಸ್ತಕ ನೀಡಿ ಮಾತನಾಡಿದರು.

ಬಳಂಜ ಶಿಕ್ಷಣ ಟ್ರಸ್ಟ್ ನ , ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅದ್ಯಕ್ಷ ಉದ್ಯಮಿ ರಾಕೇಶ್ ಹೆಗ್ಡೆ ಮಾತನಾಡಿ ಊರಿನ ಶಾಲೆ ಬೆಳಗಿಸುವ ಜೊತೆ ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ನಿಜವಾದ ಸೇವೆ. ಇಂದು ಬಳಂಜ ಶಿಕ್ಷಣ ಟ್ರಸ್ಟ್ ಮೂಲಕ ಅನೇಕ ಅಭಿವೃದ್ದಿ ಕಾರ್ಯದ ಜೊತೆ ಶಿಕ್ಷಣದ ಗುಣಮಟ್ಟ ಹೆಚ್ಚಿದೆ ಎಂದರು. ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ ಮಾತನಾಡಿ ಊರಿನ ಶಾಲೆ ಬೆಳಗಿದರೆ ಇಡಿ ಊರೇ ಬೆಳಗಿದಂತೆ. ಇಂದು ಮಕ್ಕಳ ಶಿಕ್ಷಣ , ಶಾಲಾ ಮೂಲಭೂತ ಸೌಕರ್ಯಗಳ ಬಗ್ಗೆ ಬಳಂಜ ಶಿಕ್ಷಣ ಟ್ರಸ್ಟ್ ಅನೇಕ ಕನಸುಗಳನ್ನು ಕಂಡು ದಾನಿಗಳ ಮೂಲಕ ಕನಸನ್ನು ನನಸು ಮಾಡುತ್ತಿದೆ. ಮಕ್ಕಳಿಗೆ ಆಂಗ್ಲ ಮಾದ್ಯಮ ಜೊತೆ ಕನ್ನಡ ಮಾದ್ಯಮ ಶಿಕ್ಷಣ, ಸಂಸ್ಕಾರಯುತ ಶಿಕ್ಷಣ ನೀಡುತ್ತಿದ್ದು ಇದರಿಂದ ಮಕ್ಕಳಲ್ಲಿ ಬೆಳವಣಿಗೆ ಕಾಣುತ್ತಿದ್ದೇವೆ. ಒಂದು ದಾಖಲಾತಿ ಆಗುತ್ತಿದ್ದ ಬಳಂಜ ಶಾಲೆ ಈಗ 90 ಕ್ಕೂ ಅಧಿಕ ದಾಖಲಾತಿ ಆಗುತ್ತಿರುವುದು ನಮಗೆ ಹೆಮ್ಮೆಯಾಗುತ್ತಿದೆ. ಈ ವರ್ಷದಿಂದ ನಾಲ್ಕನೇ ತರಗತಿಯಿಂದ ಉಚಿತ ಕಂಪ್ಯೂಟರ್ ಶಿಕ್ಷಣ, ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ನೀಡಲಾಗುವುದು. ಮಕ್ಕಳಿಗೆ ಅನುಕೂಲಕ್ಕೆ ಅಶ್ವಥ್ ಹೆಗ್ಡೆ ಪೌಂಡೇಶನ್ ಮೂಲಕ ವಾಹನ ವ್ಯವಸ್ಥೆ, ಉದ್ಯಮಿ ಶೇಖರ್ ದೇವಾಡಿಗರ ಕೊಡುಗೆಯಿಂದ ಚಿಣ್ಣರ ಅಂಗಣ ನಿರ್ಮಾಣ ಆಗಿದೆ. ಮುಂದೆ ಇನ್ನಷ್ಟು ಅಭಿವೃದ್ದಿಗೆ ಕಾರ್ಯಗಳನ್ನು ಮಾಡಲಿದ್ದೇವೆ ಎಂದರು.

ಬಳಂಜ ಶಿಕ್ಷಣ ಟ್ರಸ್ಟ್ ನ ಟ್ರಸ್ಟ್ ಪ್ರೌಢಶಾಲಾ ಶಾಲಾಭಿವೃದ್ದಿ ಸಮಿತಿ ಗೌರವ ಸದಸ್ಯ ಸಂತೋಷ್ ಕುಮಾರ್ ಕಾಪಿನಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಶಾಲೆ ಮುಚ್ಚುವ ಹಂತದ ಅಪಾಯ ಬಂದಾಗ ಬಳಂಜ ಶಿಕ್ಷಣ ಟ್ರಸ್ಟ್ ನಮ್ಮ ಶಾಲೆ ಬೆಳೆಗಬೇಕು ಎಂದು ಅನೇಕ ಪ್ರಯೋಗಗಳನ್ನು ಮಾಡಿ ಇಂದು ಯಶಸ್ಸು ಕಂಡಿತು. ಮಕ್ಕಳ ಹಾಜರಾತಿ ಕಂಡಾಗ ಹೆಮ್ಮೆಯಾಗುತ್ತಿದೆ ಎಂದರು. ಈ ಭಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಬಂದಿದ್ದು ಇದರಲ್ಲಿ ವಿಷೇಶ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಮತ್ತು ಶಿಕ್ಷಕರು ನಗದು ಪುರಸ್ಕಾರ ನೀಡಿ ಗೌರವಿಸಿದರು. ಪಟ್ಲ ಫೌಂಡೇಶನ್ ನಿಂದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ್ ಪೂಜಾರಿ, ಬಳಂಜ ಶಿಕ್ಷಣ ಟ್ರಸ್ಟ್ ನ ಕಾನೂನು ಸಲಹೆಗಾರ ಸತೀಶ್ ರೈ ಬಾರ್ದಡ್ಕ , ಬಳಂಜ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಶಿಕಲಾ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ವಂದಿಸಿದರು. ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya
error: Content is protected !!