September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

ಬೆಳ್ತಂಗಡಿ: ತಾಲ್ಲೂಕಿನ ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಮಾಹಿತಿಯು ಇಂದು ಶಾಸಕರ ಕಚೇರಿಗೆ ತಲುಪಿರುತ್ತದೆ. ವಿಷಯದ ಗಂಭೀರತೆಯನ್ನು ಮನಗಂಡ ಮಾನ್ಯ ಶಾಸಕರು ತಕ್ಷಣವೇ ತಾಲೂಕು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುತ್ತಾರೆ.

ಶಾಸಕರ ನಿರ್ದೇಶನದಂತೆ ಇಂದು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಪೂರ್ಣಗೊಳಿಸಿ ನಾಳೆಯಿಂದಲೇ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿರುತ್ತಾರೆ.

ಯಾವುದೇ ಅಡಚಣೆಗಳು ಎದುರಾದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದ್ದು, ಲಭ್ಯವಿರುವ ಅವಕಾಶಗಳು ಮತ್ತು ಸಂಪನ್ಮೂಲಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಪೂರಕ ಸಹಕಾರ ಒದಗಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಲಾಗಿದೆ. ಸಮಸ್ಯೆಯನ್ನು ಗಮನಕ್ಕೆ ತಂದ ಸಾರ್ವಜನಿಕರ ಕಾರ್ಯಕ್ಕೆ ವಂದನೆಗಳನ್ನು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!