September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

ವೇಣೂರು: ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು‌.

ತಾಲೂಕಿನ ಜನಪ್ರಿಯ, ಜನಸ್ನೇಹಿ ಶಾಸಕ ಹರೀಶ್ ಪೂಂಜರವರಿಗೆ ಶಾಲಾ ಮಕ್ಕಳ, ಶಿಕ್ಷಕರ ಹಾಗೂ ಪೋಷಕರ ಪರವಾಗಿ ಹೃದಯತುಂಬಿದ ಅಭಿನಂದನೆಗಳನ್ನು ಸಲ್ಲಿಸಿದರು.

ಶುದ್ಧ ನೀರಿನ ಸೌಲಭ್ಯವು ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅತ್ಯಗತ್ಯ ಎಂಬುದನ್ನು ಅರಿತು, ಶಾಲೆಯ ಮೂಲಭೂತ ಅಗತ್ಯಕ್ಕೆ ತಕ್ಷಣ ಸ್ಪಂದಿಸಿರುವ ಶಾಸಕರ ಈ ಜನಪರ ಕಾಳಜಿ ನಿಜಕ್ಕೂ ಶ್ಲಾಘನೀಯ. “ಮಕ್ಕಳ ಭವಿಷ್ಯವೇ ನಾಳೆಯ ಬಲಿಷ್ಠ ಸಮಾಜ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶಾಸಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ತಿಳಿಸಿದರು.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya
error: Content is protected !!