September 5, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

ಗುರುವಾಯನಕೆರೆ : ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಹಾಗೂ ಮೀನಾಕ್ಷಿ ದಂಪತಿಯ ಪುತ್ರಿ ಪ್ರಾಪ್ತಿ ಎಂ. ಗೌಡ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದು, ಗಮನಾರ್ಹ ಸಾಧನೆ ಮೆರೆದಿದ್ದಾರೆ.

ಈ ಅಪೂರ್ವ ಸಾಧನೆಯನ್ನು ಗುರುತಿಸಿ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಜೂ.1ರಂದು ಪ್ರಾಪ್ತಿ ಎಂ. ಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಸ್ನೇಹಿತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಪ್ರಾಪ್ತಿ ಅವರ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಪ್ರಾಪ್ತಿ ಎಂ. ಗೌಡ ಅವರು ತಮ್ಮ ಯಶಸ್ಸಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯ ಮಾರ್ಗದರ್ಶನವೇ ಕಾರಣ ಎಂದು ತಿಳಿಸಿದರು.

Related posts

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!