September 5, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಳದಂಗಡಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ, ಜೆಸಿಐ ಬೆಳ್ತಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಶಿರ್ಲಾಲು, ಯುವಶಕ್ತಿ ನಾವಾರ ಇವರ ಜಂಟಿ ಸಹಯೋಗದೊಂದಿಗೆ ಜೂ.7ರಂದು ಶ್ರೀ ಗುರು ಸಭಾ ಭವನ ಅಳದಂಗಡಿಯಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದವರಿAದ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ದಂತ ತಪಾಸಣೆ ಚಿಕಿತ್ಸೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya
error: Content is protected !!