September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಜಯ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಶಿಕ್ಷಣ ಕ್ಷೇತ್ರದಲ್ಲಿ ಜಯಶ್ರೀ ರವರ ಕಳೆದ 3 ದಶಕಗಳ ಅನುಭವ ಮತ್ತು ಸೇವೆಯನ್ನು ಗುರುತಿಸಿ ಶ್ಲಾಘಿಸಿ ಶುಭ ಹಾರೈಸಿದರು. ಇದೇ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ವ್ಯವಸ್ಥೆ ಮತ್ತು ಮೌಲ್ಯಯುತ ಶಿಕ್ಷಣದ ಕುರಿತು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದರು.

ಭೇಟಿಯ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಅರವಿಂದ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಧ್ಭಾವನಾ ದಿನಾಚರಣೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya
error: Content is protected !!