September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ 2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐ ಐ ಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಾದ ಧನುಷ್ ಗುತ್ತಿ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 95ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿರುತ್ತಾರೆ. ಆದಿತ್ಯ ಅನಿಲ್ ಕೆಂಚಣ್ಣನವರ್ 1803 ರ‍್ಯಾಂಕ್ , ಪ್ರಕೃತಿ ಶ್ರೀಧರ್ 1814 ರ‍್ಯಾಂಕ್ (ಕೆಟಗರಿ), ಗೌತಮ್ ಎ.ಎನ್ 3125 ರ್ಯಾಂಕ್ (ಕೆಟಗರಿ), ಸಮ್ಮಿತ್ ಎಚ್.ಎಸ್ 4372 ರ‍್ಯಾಂಕ್ , ಹಾಗೂ ಜೆಂಕರ್ ಎಂ 22318 ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿನ ಸಾಧನಾ ಪಥಕ್ಕೆ ಮತ್ತೊಂದು ಗರಿ ಮೂಡಿಸಿದ್ದಾರೆ.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳು ದಾಖಲಿಸಿದ ಈ ಸಾಧನೆಯು ಅವರ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪೋಷಕರ ಪ್ರೋತ್ಸಾಹ ಹಾಗೂ ಕಾಲೇಜಿನ ಗುಣಮಟ್ಟದ ಬೋಧನೆ ಮತ್ತು ತರಬೇತಿಯ ಪ್ರತಿಫಲವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತೀಯ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ಕಾಲೇಜು ಹಾಗೂ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭ ಹಾರೈಸಿದ್ದಾರೆ.

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ಜೆಇಇ ಹಾಗೂ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿದೆ. ಜೆಇಇ ಅಡ್ವಾನ್ಸ್ಡ್ 2026ರ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಸಾಕ್ಷಿಯಾಗಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya
error: Content is protected !!