September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ದ ಚಟುವಟಿಕೆ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.

ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ (ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ) ರವೀಂದ್ರ ಶೆಟ್ಟಿ ಅವರು ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಗುರುತಿಸಿ, ಅವರಿಗೆ ಶಾಲು ಹೊದಿಸಿ, ಭಗವದ್ಗೀತೆ ನೀಡಿ ಆತ್ಮೀಯವಾಗಿ ಗೌರವಿಸಿಸಲಾಯಿತು.

ಈ ಸಂದರ್ಭದಲ್ಲಿ ರವೀಂದ್ರ ಶೆಟ್ಟಿ ಅವರು ತಾನು ಬರೆದ ಅಲೆಮಾರಿ ಜೀವನ ಪುಸ್ತಕವನ್ನು ನೀಡಿ ಮಾತನಾಡುತ್ತಾ ಸಮಾಜದ ಪ್ರೀತಿ ಮತ್ತು ಗೌರವ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಗ್ರಾಮೀಣ ಭಾಗದ ಶಿಕ್ಷಣ ಹಾಗೂ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ನನ್ನ ಸೇವೆ ನಿರಂತರವಾಗಿರಲಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಘುಮಂತು ಕಾರ್ಯ ವಿಭಾಗ ಸಂಯೋಜಕ ಸುದರ್ಶನ್ ಕನ್ಯಾಡಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ದೀಕ್ಷಿತ್ ಡಿ ವಿ ಧರ್ಮಸ್ಥಳ, ಪ್ರಮೋದ್ ದಿಡುಪೆ,ಶರತ್ ಶೆಟ್ಟಿ,ಕರುಣಾಕರ ಮಾಚಾರು ಹಾಗೂ ಪ್ರಸಾದ್ ಪಿಲಿಗೂಡು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya
error: Content is protected !!