July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

ಮಿತ್ತಬಾಗಿಲು: ತುಳುಕೂಟ ಇಸ್ರೇಲ್ ಇದರ ವತಿಯಿಂದ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕಿಲ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಎಲ್ಲಾ 151 ವಿದ್ಯಾರ್ಥಿಗಳಿಗೆ ಸುಮಾರು ರೂ.1.30 ಲಕ್ಷ ಮೌಲ್ಯದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣಾ ಸಮಾರಂಭವು ಜೂ. 1 ರಂದು ಜರುಗಿತು.

ಸಾಮೂಹಿಕ ನಾಯಕತ್ವ ಹಾಗೂ ಒಗ್ಗಟ್ಟಿನಿಂದ ಇಸ್ರೇಲ್ ನಲ್ಲಿ ತುಳುನಾಡಿನ ಸಾಂಸ್ಕೃತಿಕ ವೈವಿಧ್ಯ, ಆಚಾರ, ವಿಚಾರಗಳನ್ನು ವಿಭಿನ್ನ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಉಳಿಸಿ ಪೋಷಿಸುತ್ತಿರುವ ತುಳುಕೂಟ ಇಸ್ರೇಲ್ ಸುದೀರ್ಘ 11 ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳನ್ನು ನಡೆಸುತ್ತಾ ಬಂದಿದೆ.

ಇಂದಿನ ಸೇವಾಯೋಜನೆಯ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ ವಹಿಸಿದ್ದರು.


ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಸವಲಿಂಗಪ್ಪ,ಬಿ ಆರ್ ಸಿ ಸಿದ್ಧಲಿಂಗಯ್ಯ, ಬಿ ಆರ್ ಸಿ ಮೋಹನ್, ಮಿತ್ತಬಾಗಿಲು ಪಿಡಿಒ ಮೋಹನ್ ಬಂಗೇರ, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ವಿನಯಚಂದ್ರ ಸೇನರಬೆಟ್ಟು, ಎಸ್ ಡಿ ಎಂ ಸಿ ಅಧ್ಯಕ್ಷ ರತನ್ ಶೆಟ್ಟಿ,ಮಂಜುಶ್ರೀ ಸೀನಿಯರ್ ಛೇಂಬರ್ ನ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ರೈ, ಜತೆ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕರಾದ ರಮೇಶ್ ಪೈಲಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳನ್ನು ಹಸ್ತಾಂತರಗೈದರು.


ಜಾನ್ ಅರ್ವಿನ್ ಡಿಸೋಜ ಹಾಗೂ ಹರೀಶ್ ಶೆಟ್ಟಿ ರವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.


ಮಂಜುಶ್ರೀ ಸೀನಿಯರ್ ಛೇಂಬರ್ ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್ ನಾಯಕ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಲ್ಯಾನ್ಸಿ ಪಿರೇರಾ ನಿರೂಪಿಸಿದರು, ಶಿಕ್ಷಕ ಚಂದ್ರಶೇಖರ್ ವಂದನಾರ್ಪಣೆಗೈದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು, ಮಂಜುಶ್ರೀ ಸೀನಿಯರ್ ಛೇಂಬರ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya
error: Content is protected !!